Saturday, May 18, 2024

ಪ್ರಾಯೋಗಿಕ ಆವೃತ್ತಿ

ಅಡ್ಡಂಡ ಕಾರ್ಯಪ್ಪ ವಿರುದ್ಧ ಭುಗಿಲೆದ್ದ ಆಕ್ರೋಶ : ನಾಳೆ ಮಂಡ್ಯದಲ್ಲಿ ಒಕ್ಕಲಿಗರ ಪ್ರತಿಭಟನೆ

ಒಕ್ಕಲಿಗರ ಬಗ್ಗೆ ಹಾಗೂ ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದ ಸ್ವಾಮೀಜೀ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಿರುದ್ದ ಒಕ್ಕಲಿಗರ ಆಕ್ರೋಶ ಭುಗಿಲೆದಿದ್ದು, ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ನಾಳೆ ಮಂಡ್ಯದಲ್ಲಿ ಖಂಡನಾ ಸಭೆ – ಪ್ರತಿಭಟನೆ

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಸ್ವಾಮೀಜಿಯವರ ಬಗ್ಗೆ ನಾಲಿಗೆಯನ್ನು ಹರಿಬಿಟ್ಟು ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಲು ಮಾ.27ರಂದು ರಂದು ಮಂಡ್ಯ ನಗರದ ರೈತ ಸಭಾಂಗಣದಲ್ಲಿ ಬೆಳಿಗ್ಗೆ 10:30 ಕ್ಕೆ ಖಂಡನಾ ಸಭೆ ಏರ್ಪಡಿಸಲಾಗಿದೆ.

ಈ ಸಭೆಯಲ್ಲಿ ಕಾರ್ಯಪ್ಪನ ಹೇಳಿಕೆಯನ್ನು ತೀವ್ರವಾಗಿ ಖಂಡಿಸುವ ಜೊತೆಗೆ, ಆತ ರಂಗಾಯಣ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ಕೊಡಲು ಆಗ್ರಹಿಸಲಾಗುವುದು ಅಥವಾ ಸರ್ಕಾರ ಅವರನ್ನು ಆ ಸ್ಥಾನದಿಂದ ಕಿತ್ತೊಗೆಯಲು ಒತ್ತಾಯಿಸಲಾಗುವುದು.

ಬೃಹತ್ ಹೋರಾಟದ ಎಚ್ಚರಿಕೆ 

ಅಡ್ಡಂಡ ಕಾರ್ಯಪ್ಪನನ್ನು ಕೂಡಲೇ ವಜಾ ಮಾಡದಿದ್ದಲ್ಲಿ ಮಂಡ್ಯ ಜಿಲ್ಲೆಯಾದ್ಯಂತ ಪಕ್ಷಾತೀತವಾಗಿ ಬೃಹತ್ ಮಟ್ಟದ ಹೋರಾಟವನ್ನು ಹಮ್ಮಿಕೊಳ್ಳಲು ನಿರ್ಣಯಿಸಲಾಗುವುದು. ಈ ಖಂಡನಾ ಸಭೆಗೆ ಜಿಲ್ಲೆಯ ಪ್ರಜ್ಞಾವಂತ ಗಣ್ಯರು, ಎಲ್ಲಾ ರಾಜಕೀಯ ಪಕ್ಷದ ನಾಯಕರು, ಒಕ್ಕಲಿಗ ಸಂಘದ ನಿರ್ದೇಶಕರು, ಮುಖಂಡರು ಸಮುದಾಯದ ಸಂಘಟನೆಯ ಮುಖಂಡರು, ರೈತ, ಕಾರ್ಮಿಕ ಸಂಘಟನೆಗಳು ಮುಖಂಡರು, ಕನ್ನಡಪರ ಹೋರಾಟಗಾರರು, ಜನಪ್ರತಿನಿಧಿಗಳು ಹಾಗೂ ಮಠದ ಸದ್ಭಕ್ತರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿದ್ದಾರೆ.  ಆದ್ದರಿಂದ ಸ್ವಾಭಿಮಾನಿ ಒಕ್ಕಲಿಗರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಶಕ್ತಿಯನ್ನ ತುಂಬಬೇಕೆಂದು ನೇಗಿಲಯೋಗಿ ಸಮಾಜಸೇವಾ ಟ್ರಸ್ಟ್ ಅಧ್ಯಕ್ಷ ಎ ಸಿ ರಮೇಶ್ ಕೋರಿದ್ದಾರೆ.

ಹೆಚ್ಚಿನ ವಿವರಗಳಿಗೆ ಮೊ.9742664190, 9844048459, 9900509900, 9535539332 ಹಾಗೂ 9900568693 ಸಂಪರ್ಕಿಸಬಹುದು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!