ಶಾಲಾ-ಕಾಲೇಜುಗಳಿಗೆ ತೆರಳುವ ಸಂದರ್ಭದಲ್ಲಿ ಸಮರ್ಪಕ ಸಾರಿಗೆ ಬಸ್ ವ್ಯವಸ್ಥೆ ಇಲ್ಲವಾಗಿದ್ದು, ಈ ಅವಧಿಯಲ್ಲಿ ಹೆಚ್ಚು ಬಸ್ಸುಗಳನ್ನು ನಿಯೋಜನೆ ಮಾಡಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಮಂಡ್ಯ ತಾಲ್ಲೂಕಿನ ಕೊಮ್ಮೇರಹಳ್ಳಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.
ಇಂದು ಬೆಳಿಗ್ಗೆ ಕೊಮ್ಮೇರಹಳ್ಳಿ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ತಡೆದು ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ಗ್ರಾಮಸ್ಥರು ಕೈಜೋಡಿಸಿದರು. ಸಾರಿಗೆ ವಿಭಾಗದ ನಿಯಂತ್ರಣಾಧಿಕಾರಿಗೆ ಮನವಿ ಸಲ್ಲಿಸಿದರು.
ಈ ಸಮಯದಲ್ಲಿ ಸ್ಥಳಕ್ಕಾಗಮಿಸಿದ ಅಧಿಕಾರಿಗಳನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡರು. ಅನಂತರ ಸಮರ್ಪಕ ಬಸ್ ಗಳನ್ನು ಹಾಕಿವುದಾಗಿ ಅಧಿಕಾರಿಗಳು ಭರವಸೆ ನೀಡಿದರು.