Tuesday, May 14, 2024

ಪ್ರಾಯೋಗಿಕ ಆವೃತ್ತಿ

ಹಾಸನ ಪೆನ್‌ಡ್ರೈವ್ ಪ್ರಕರಣ | ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ಎಸ್‌ಐಟಿ ಮುಖ್ಯಸ್ಥ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ವಿಶೇಷ ತನಿಖಾ ದಳ ರಚಿಸುವುದಾಗಿ ನಿನ್ನೆ ತಿಳಿಸಿದ್ದ ಸರ್ಕಾರವು, ಇಂದು ಅಧಿಕೃತವಾಗಿ ತಂಡವನ್ನು ರಚಿಸಿದೆ.

ಎಸ್‌ಐಟಿ ತಂಡದ ಮುಖ್ಯಸ್ಥರನ್ನಾಗಿ ಸಿಐಡಿಯ ಎಡಿಜಿಪಿ(ಅಪರ ಪೊಲೀಸ್ ಮಹಾನಿರ್ದೇಶಕ)ಯಾಗಿರುವ, ಹಿರಿಯ ಐಪಿಎಸ್ ಅಧಿಕಾರಿ ಬಿಜಯ್ ಕುಮಾರ್ ಸಿಂಗ್ ಅವರನ್ನು ನೇಮಕಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಇವರು ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಚಿಸಲಾಗಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥ ಕೂಡ ಆಗಿದ್ದರು.

ವಿಶೇಷ ತನಿಖಾ ತಂಡದ ಸದಸ್ಯರನ್ನಾಗಿ ಬೆಂಗಳೂರು ಪೊಲೀಸ್ ಪ್ರಧಾನ ಕಚೇರಿಯ ಸಹಾಯಕ ಪೊಲೀಸ್ ಮಹಾ ನಿರೀಕ್ಷಕರಾದ ಶ್ರೀಮತಿ ಸುಮನ್ ಡಿ ಪನ್ನೇಕರ್ ಹಾಗೂ ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕಿಯಾಗಿರುವ ಶ್ರೀಮತಿ ಸೀಮಾ ಲಟ್ಕರ್ ಅವರನ್ನು ನೇಮಿಸಿ, ಸರ್ಕಾರ ಆದೇಶ ಹೊರಡಿಸಿದೆ.

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಬರೆದಿದ್ದ ಪತ್ರವನ್ನು ಉಲ್ಲೇಖಿಸಿ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧರಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ನಿನ್ನೆ ಪ್ರಕಟಿಸಿದ್ದರು. ಒಳಾಡಳಿತ ಇಲಾಖೆ(ಅಪರಾಧಗಳು)ಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಅಂಬಿಕಾ ಅವರು ಇಂದು(ಏ.28) ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!