Tuesday, September 17, 2024

ಪ್ರಾಯೋಗಿಕ ಆವೃತ್ತಿ

ನಾಗಮಂಗಲ| ಜೂ.11ಕ್ಕೆ ಆದಿಚುಂಚನಗಿರಿ ವಿ.ವಿ ಘಟಿಕೋತ್ಸವ

ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ವಿಶ್ವವಿದ್ಯಾನಿಲಯದ 6 ನೇ ವಾರ್ಷಿಕ ಘಟಿಕೋತ್ಸವವು  ಜೂ.11ರಂದು ಬೆಳಿಗ್ಗೆ 10.30 ಗಂಟೆಗೆ ವಿಶ್ವವಿದ್ಯಾಲಯದ ಆವರಣದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಸಭಾಂಗಣದಲ್ಲಿ ನಡೆಯಲಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಎ. ಶೇಖರ್ ತಿಳಿಸಿದರು .

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಘಟಿಕೋತ್ಸವದ ದಿವ್ಯ ಸಾನಿಧ್ಯವನ್ನು ಆದಿಚುಂಚನಗಿರಿ ವಿಶ್ವವಿದ್ಯಾನಿಲಯದ ಕುಲಪತಿ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿ ವಹಿಸಲಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅಧ್ಯಕ್ಷತೆ ವಹಿಸುವರು ಎಂದರು.

ಬೌತಿಕ ಸಂಶೋಧನಾ ಪ್ರಯೋಗಾಲಯದ ನಿರ್ವಹಣಾ ಮಂಡಳಿ ಅಧ್ಯಕ್ಷ ಡಾ.ಎ.ಎಸ್ ಕಿರಣ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು,  ಈ ಸಂದರ್ಭದಲ್ಲಿ 131 ವೈದ್ಯಕೀಯ ಪದವೀಧರರು ಸೇರಿದಂತೆ, 1365 ಅಭ್ಯರ್ಥಿಗಳಿಗೆ ವಿವಿಧ ಪದವಿಗಳನ್ನು ಪ್ರದಾನ ಮಾಡಲಾಗುವುದು.  ಐದು ಅಭ್ಯರ್ಥಿಗಳಿಗೆ ಡಾಕ್ಟರ್ ಆಫ್ ಫಿಲಾಸಫಿ ಪದವಿ ನೀಡಲಾಗುವುದು ಎಂದು ನುಡಿದರು.

ಗೋಷ್ಠಿಯಲ್ಲಿ ಡಾ.ಪ್ರಾಣೇಶ್ ಗುಡೂರು, ಡಾ.ಸುಬ್ಬರಾಯ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!