Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅಸ್ವಸ್ಥರಾಗಿದ್ದು ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುವ 92 ವರ್ಷದ ದೇವೇಗೌಡರ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಸೋಮವಾರ ರಾತ್ರಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿಸಿದ್ದಾರೆ.

ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಬುಧವಾರ ಐಸಿಯುನಿಂದ ವಾರ್ಡ್‌ಗೆ ಶಿಫ್ಟ್ ಮಾಡಲಾಗುತ್ತದೆ. ಅವರ ಅಭಿಮಾನಿಗಳು, ಜೆಡಿಎಸ್ ಕಾರ್ಯಕರ್ತರು ಆತಂಕಪಡುವ ಅಗತ್ಯ ಇಲ್ಲ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ.

ರಾಜ್ಯಸಭೆ ಸದಸ್ಯರಾಗಿರುವ ದೇವೇಗೌಡರು ಇಳಿವಯಸ್ಸಿನಲ್ಲೂ ಸಂಸತ್‌ ಕಲಾಪದಲ್ಲಿ ಸಕ್ರಿಯರಾಗಿ ಭಾಗವಹಿಸುತ್ತಿದ್ದಾರೆ. ರಾಜ್ಯದ ಪರವಾಗಿ ಕಲಾಪದಲ್ಲಿ ಮಾತನಾಡುವ ಅವರು ರಾಜ್ಯದ ಸಮಸ್ಯೆ ಬೇಡಿಕೆಗಳನ್ನು ಕುರಿತು ಪ್ರಧಾನಿ ಸೇರಿದಂತೆ ಅನೇಕ ಕೇಂದ್ರ ಸಚಿವರನ್ನು ಭೇಟಿ ಮಾಡುತ್ತಲೇ ಇರುತ್ತಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ