Tuesday, November 24, 2026

ಪ್ರಾಯೋಗಿಕ ಆವೃತ್ತಿ

ಆರೋಗ್ಯದಲ್ಲಿ ಏರುಪೇರು| ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್‌ ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಹೆಚ್‌ ಡಿ ದೇವೇಗೌಡ ಅವರಿಗೆ ಈಗಾಗಲೇ 91 ವರ್ಷ ಪೂರ್ಣಗೊಂಡಿದ್ದು, ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಬಂದಿರುವ ಮಾಹಿತಿಯ ಪ್ರಕಾರ ದೇವೇಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಇಳಿ ವಯಸ್ಸಿನಲ್ಲೂ ಕೂಡ ಅವರು ಸಕ್ರಿಯ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದಾರೆ. ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರ, ಸಭೆಗಳನ್ನು ನಡೆಸುತ್ತಿದ್ದಾರೆ. ಇತ್ತೀಚೆಗೆ ಮುಕ್ತಾಯ ಕಂಡ ರಾಜ್ಯಸಭಾ ಅಧಿವೇಶನದಲ್ಲಿ ಕೂಡ ಪಾಲ್ಗೊಂಡಿದ್ದರು. ಅಲ್ಲದೇ, ಜ.22ರಂದು ಅಯೋಧ್ಯೆಯ ರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲೂ ಕುಟುಂಬ ಸಹಿತ ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ