Thursday, October 24, 2024

ಪ್ರಾಯೋಗಿಕ ಆವೃತ್ತಿ

ಬಸವಣ್ಣನ ತತ್ವಗಳ ಅಳವಡಿಸಿಕೊಳ್ಳಿ : ಶೈಲಜ

ಕಾಯಕಯೋಗಿ ಬಸವಣ್ಣನವರ ತತ್ವ,ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಅವರ ತತ್ವಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ನಡೆಯಬೇಕೆಂದು ಮೈಸೂರಿನ ಜೆಎಸ್ಎಸ್ ಕಲಾ ಮತ್ತು ವಾಣಿಜ್ಯ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕಿ ಡಾ.ಹೆಚ್.ಟಿ. ಶೈಲಜ ಅಭಿಪ್ರಾಯ ವ್ಯಕ್ತಪಡಿಸಿದರು.

ಮಂಡ್ಯ ತಾಲ್ಲೂಕಿನ ಹೊಸೂರಿನ ಅಕ್ಕಮಹಾದೇವಿ ಮಹಿಳಾ ವಿ.ವಿ ಕೇಂದ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಂಸಧ್ವನಿ ಸಾಂಸ್ಕೃತಿಕ ಟ್ರಸ್ಟ್ ಮೈಸೂರು ಇವರ ಸಹಯೋಗದಲ್ಲಿ ಆಯೋಜಿಸಿದ್ದ ಬಸವ ಜಯಂತಿ ಮತ್ತು ಸಾಂಸ್ಕೃತಿಕ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣನವರು ಹನ್ನೆರಡನೇ ಶತಮಾನದಲ್ಲೇ ಅನುಭವ ಮಂಟಪ ಸ್ಥಾಪಿಸಿ, ನಡೆ, ನುಡಿ,ಸಿದ್ಧಾಂತ,ಕಾಯಕ ಹಾಗೂ ದಾಸೋಹದಂತಹ ಕಾರ್ಯಗಳನ್ನು ಆಗಿನ ಕಾಲದಲ್ಲೇ ಅಳವಡಿಸಿಕೊಂಡು ಸಮಾಜದಲ್ಲಿದ್ದ ಜಾತಿ ವ್ಯವಸ್ಥೆ ಕಿತ್ತೊಗೆದ ಮಹಾನ್ ಪುರುಷ ಎಂದು ಬಣ್ಣಿಸಿದರು.

ಪ್ರೊ.ಹೇಮಲತಾ ಎಚ್.ಎಂ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,ಇಂದು ಬಸವಣ್ಣನವರ ಪ್ರತಿಮೆ ಮಾಡಿ ನಿಲ್ಲಿಸುವುದು ನಡೆಯುತ್ತಿದೆ.ಅವರ ಪ್ರತಿಮೆ ಮಾಡಿ ನಿಲ್ಲಿಸುವುದಕ್ಕಿಂತ ಅವರ ತತ್ವಗಳನ್ನು ಪ್ರತಿಯೊಬ್ಬರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ತುಂಬಾ ಮುಖ್ಯ ಎಂದರು.

ಬಸವಣ್ಣನವರ ಚಿಂತನೆಗಳು ಸಮಾಜಮುಖಿಯಾಗಿದ್ದವುಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಅನ್ಯರಿಗೆ ಅಸಹ್ಯ ಪಡಬೇಡ,ಇದಿರ ಹಳಿಯಲು ಬೇಡ,ಇದೇ ಅಂತರಂಗ ಶುದ್ದಿ, ಇದೇ ಬಹಿರಂಗ ಶುದ್ದಿ ಎಂಬ ಬಸವಣ್ಣನವರ ವಚನದಂತೆ ಸಪ್ತ ಸೂತ್ರಗಳನ್ನು ನಿತ್ಯ ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಂಡರೆ ಜೀವನ ಸುಗಮವಾಗುತ್ತದೆ ಎಂದು ಬಸವಣ್ಣ ತಿಳಿಸಿಕೊಟ್ಟಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಕರ್ನಾಟಕ ಕಲಾಶ್ರೀ ಮೈಸೂರಿನ ಪ್ರೊ. ಎಸ್.ಮಲ್ಲಣ್ಣ ಪಿ.ಕಾಳಿಂಗರಾಯರು ಹಾಡಿರುವ ಭಾವಗೀತೆ, ಜನಪದ ಗೀತೆ, ರತ್ನನ ಪದ ಹಾಗೂ ಆಯ್ದ ಚಿತ್ರಗೀತೆಗಳನ್ನು ಹಾಡುವ ಮೂಲಕ ರಂಜಿಸಿದರು.

ಅಕ್ಕಮಹಾದೇವಿ ಮಹಿಳಾ ವಿ.ವಿಯ ಕನ್ನಡ ವಿಭಾಗದ ಉಪನ್ಯಾಸಕರಾದ ಡಾ.ಗೀತಾಮಣಿ ಪಿ.ಎನ್, ಡಾ.ರಮ್ಯ ಎನ್ ಹಾಗೂ ವಾಣಿಜ್ಯ ವಿಭಾಗದ ರಮ್ಯ ಕೆ.ಕೆ. ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!