Saturday, November 21, 2026

ಪ್ರಾಯೋಗಿಕ ಆವೃತ್ತಿ

ಕಲಬೆರೆಕೆ ಆಹಾರದಿಂದ ಕ್ಯಾನ್ಸರ್ ಬರುವ ಸಾಧ್ಯತೆಯಿದೆ

ಸಾರ್ವಜನಿಕರು ಕಲಬೆರಕೆ ಆಹಾರ ಪದಾರ್ಥಗಳ ಬಗ್ಗೆ ಹೆಚ್ಚು ಜಾಗೃತಿ ವಹಿಸಬೇಕು.ಇಲ್ಲದಿದ್ದರೆ ಅನಾರೋಗ್ಯ ಉಂಟಾಗಿ ಕ್ಯಾನ್ಸರ್ ನಂತಹ ಕಾಯಿಲೆಗೆ ತುತ್ತಾಗುವ ಸಾಧ್ಯತೆ ಇದೆಯೆಂದು ಬೆಂಗಳೂರು ಸಂಚಾರಿ ಆಹಾರ ಪ್ರಯೋಗಾಲಯದ ಸಾರ್ವಜನಿಕ ವಿಶ್ಲೇಷಕ ಮಲ್ಲಿಕಾರ್ಜುನ ಎಚ್ಚರಿಕೆ ನೀಡಿದರು.

ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಡ್ಯ ವತಿಯಿಂದ ಕಲಬೆರಕೆ ಆಹಾರದ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಂಚಾರಿ ವಾಹನಕ್ಕೆ ಇಂದು ಚಾಲನೆ ನೀಡಿದ ನಂತರ ಅವರು ಮಾತನಾಡಿದರು.

ವಿವಿಧ ಆಹಾರ ಪದಾರ್ಥಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಸಾರ್ವಜನಿಕರಿಗೆ ತೋರಿಸಿ ವಿವರಣೆ ನೀಡಿ ಕಲಬೆರಕೆ ಆಹಾರದ ಬಗ್ಗೆ ಜಾಗೃತಿ ಮೂಡಿಸಿದರು.

ಸಂಚಾರಿ ಆಹಾರ ಪ್ರಯೋಗಾಲಯ ವಾಹನಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎನ್.ಕೆ.ವೆಂಕಟೇಶ್ ಚಾಲನೆ ನೀಡಿ ಮಾತನಾಡಿ, ಉತ್ತಮ ಗುಣಮಟ್ಟದ ಆಹಾರ ಪಡೆಯುವ ಮತ್ತು ಸೇವಿಸುವ ಹಕ್ಕು ಪ್ರತಿಯೊಬ್ಬ ನಾಗರಿಕರಿಗಿದೆ.

ಸಾರ್ವಜನಿಕರು ಕಲಬೆರಕೆ ಆಹಾರ ಮಾರಾಟ ಮಾಡುವವರ ಬಗ್ಗೆ ಜಾಗೃತರಾಗಿ ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಪಡೆಯುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಸಲಹೆ ನೀಡಿದರು.

ಮುಖ್ಯ ವೈದ್ಯಾಧಿಕಾರಿ ಡಾ. ಪಿ. ಮಾರುತಿ, ಹಿರಿಯ ಆಹಾರ ಸುರಕ್ಷತಾಧಿಕಾರಿ ಹೆಚ್. ಎಸ್. ನಾಗರಾಜ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್. ಡಿ. ಬೆನ್ನೂರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ. ಮೋಹನ್ ಹಾಗೂ ಆಸ್ಪತ್ರೆ ಸಿಬ್ಬಂದಿಗಳು,ಸಾರ್ವಜನಿಕರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ