ಮಳವಳ್ಳಿ ಪಟ್ಟಣದಲ್ಲಿ ಇಂದು ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಒತ್ತಾಯಿಸಿ ವಕೀಲರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮಳವಳ್ಳಿ ಪಟ್ಟಣದ ವಕೀಲರ ಕಚೇರಿಯಿಂದ ಹೊರಟ ಪ್ರತಿಭಟನಾಕಾರರು ಸರ್ಕಾರ ವಿರುದ್ದ ಘೋಷಣೆ ಕೂಗುತ್ತಾ ಪ್ರಮುಖ ಬೀದಿಗಳ ಮೂಲಕ ತಹಸೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಸುಂದರ್ ಮಾತನಾಡಿ, ವಕೀಲರ ಸಂರಕ್ಷಣಾ ಕಾಯಿದೆ ಮುಂದಿನ ಅಧಿವೇಶನದಲ್ಲಿ ಜಾರಿಯಾಗಬೇಕು ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಕಾರ್ಯದರ್ಶಿ ನಟೇಶ್, ಮಲ್ಲಪ್ಪ, ಮುತ್ತರಾಜು, ಜಗದೀಶ್ ಸೇರಿದಂತೆ ಹಲವರು ವಕೀಲರು ಪ್ರತಿಭಟನೆಯಲ್ಲಿದ್ದರು.




