ರಾಷ್ಟ್ರಮಾತಾ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜಯಂತೋತ್ಸವ ಮತ್ತು ಸಾಧಕಿಯರಿಗೆ ಸನ್ಮಾನ ಸಮಾರಂಭ ಮೇ 31 ರಂದು ಬೆಳಿಗ್ಗೆ 9 ಗಂಟೆಗೆ ಮಂಡ್ಯ ನಗರದ ಕನಕ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಮಂಡ್ಯ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್ ತಿಳಿಸಿದರು.
ಮಂಡ್ಯ ನಗರದ ಕನಕ ಭವನದಲ್ಲಿ ಜನಪರ ಸಾಹಿತ್ಯ ಪರಿಷತ್ತು (ರಿ), ಬೆಂಗಳೂರು,ಕರ್ನಾಟಕ ರಾಜ್ಯ ಅಹಲ್ಯಾಬಾಯಿ ಹೋಳ್ಳರ್ ಮಹಿಳಾ ಸಾಂಸ್ಕೃತಿಕ ಪರಿಷತ್ತು (ರಿ) ಮಂಡ್ಯ, ಮಂಡ್ಯ ಜಿಲ್ಲಾ ಕುರುಬರ ಸಂಘ ಇವರ ವತಿಯಿಂದ ನೆಡೆದ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ಜಯಂತೋತ್ಸವ ಕಾರ್ಯ ಕ್ರಮದ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಹಲ್ಯಾಬಾಯಿ ಹೋಳ್ಕರ್ ಅವರು ರಾಜಮಾತೆಯಾಗಿದ್ದರು. ಅವರ 70 ವರ್ಷಗಳ ಜೀವನದಲ್ಲಿ ದೇಶಕ್ಕೆ ಕೊಟ್ಟ ಕಾರ್ಯಕ್ರಮಗಳು ಇಂದಿಗೂ ಸ್ಮರಣೆಯಾಗಿವೆ. ಮಹಾರಾಷ್ಟ್ರದಲ್ಲಿ ಇವರನ್ನು ಮಹಾತಾಯಿ ಎಂದು ಗೌರವಿಸುತ್ತಾರೆ. ಇವರು ಮಹಿಳಾ ಅಭಿವೃದ್ಧಿಗೆ ಹೋರಾಟ ಮಾಡಿ ಮಹಿಳಾ ಸಬಲೀಕರಣಕ್ಕೆ ಶ್ರಮಿಸಿದ್ದಾರೆ ಇವರ ಸಾಧನೆಗಳು ಪರಿಚಯ ಆಗಬೇಕು. ಈ ಕಾರ್ಯ ಕ್ರಮಕ್ಕೆ ಜಿಲ್ಲೆಯಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸ ಬೇಕು ಎಂದು ತಿಳಿಸಿದರು.
ಅಂದು ನಡೆಯುವ ಕಾರ್ಯಕ್ರಮ ವನ್ನು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಸೌಮ್ಯರೆಡ್ಡಿ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಅಹಲ್ಯಾಬಾಯಿ ಹೋಳ್ಳರ್ ಮಹಿಳಾ ಸಾಂಸ್ಕೃತಿಕ ಪರಿಷತ್ತು ಮಂಡ್ಯ ಜಿಲ್ಲಾಧ್ಯಕ್ಷೆ ಸಾವಿತ್ರಮ್ಮ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್ ಗಣಿಗ ಅವರು ಅಭಿನಂದನಾ ನುಡಿಗಳನ್ನಾಡಲಿದ್ದು ಡಾ.ರಾಮ ಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ಬಿ.ಎಸ್.ಶಿವಣ್ಣ ಅವರು ಪುಷ್ಪಾರ್ಚನೆ ನೆರವೇರಿಸಲಿದ್ದಾರೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಅಹಲ್ಯಾಬಾಯಿ ಹೋಳ್ಳರ್ ಮಹಿಳಾ ಸಾಂಸ್ಕೃತಿಕ ಪರಿಷತ್ತು ರಾಜ್ಯಾಧ್ಯಕ್ಷೆ ಕೆ.ಆರ್.ಪ್ರಭಾವತಿಯವರು ಸಾಧಕಿಯರಿಗೆ ಸನ್ಮಾನಿಸಲಿದ್ದಾರೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಪಂಚ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪ ಅಮರನಾಥ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಮಂಜುಳಾ, ಕರ್ನಾಟಕ ಪ್ರದೇಶ ಕುರುಬರ ಸಂಘದ ನಿಕಟ ಪೂರ್ವ ಅಧ್ಯಕ್ಷ ಸುಬ್ಬಣ್ಣ, ಆರ್ ಟಿಓ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ, ಉದ್ಯಮಿ ಪುಟ್ಟಸ್ವಾಮಿ ಕರಡಿಕೊಪ್ಪಲು, ಮಂಡ್ಯ ಜಿಲ್ಲಾ ಕುರುಬರ ಸಂಘದ ಮಾಜಿ ಅಧ್ಯಕ್ಷ ಕೆ.ಎಚ್. ನಾಗರಾಜು, ಚಲನಚಿತ್ರ ನಿರ್ಮಾಪಕ ಸುರೇಶ್ ಮಾವಿನಕೆರೆ, ಸಮಾಜ ಸೇವಕ ನಿಶಾಂತ್ ಪಟೇಲ್ ಸೇರಿದಂತೆ ಮತ್ತಿತರರು ಆಗಮಿಸಲಿದ್ದಾರೆ ಎಂದು ಹೇಳಿದರು.
ಜನಪರ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ.ಮಹೇಶ್ ಚಿಕ್ಕಲ್ಲೂರು ಮಾತನಾಡಿ ರಾಷ್ಟ್ರ ಮಾತಾ ಅಹಲ್ಯಾ ಬಾಯಿ ಹೋಳ್ಕರ್ ಅವರ ರಥಯಾತ್ರೆ ಭಾರತದ ಕಾಶ್ಮೀರದಿಂದ ಎಲ್ಲಾ ಕಡೆ ಸಾಗಿ ರಾಮೇಶ್ವರದಿಂದ ಹೊರಟು ರಥಯಾತ್ರೆಯು ಮೇ.31ರಂದು ಮಂಡ್ಯ ನಗರಕ್ಕೆ ಆಗಮಿಸುತ್ತಿರು ವುದು ವಿಶೇಷವಾಗಿದ್ದು, ಜಿಲ್ಲೆಗೆ ಹಾಗೂ ಕಾರ್ಯಕ್ರಮಕ್ಕೆ ಶೋಭೆ ತರುವ ವಿಚಾರ ಎಂದು ಹೇಳಿದರು.
ಅಹಲ್ಯಾ ಬಾಯಿ ಹೋಳ್ಕರ್ ಅವರು ಹೆಣ್ಣು ಮಕ್ಕಳಿಗೆ ಸ್ಪೂರ್ತಿಯಾಗಿದ್ದು ಅಂದು ನಡೆಯುವ ಕಾರ್ಯಕ್ರಮದಲ್ಲಿ ಜನಪದ ಗಾಯನವಿರುತ್ತದೆ 6 ಜನ ಮಹಿಳಾ ಸಾಧಕಿಯರಾದ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಡಾ.ಆರ್.ಎನ್. ದೇವಕಿ,ಹೇಮಾವತಿ, ಆಡಳಿತದಲ್ಲಿ ಶ್ವೇತಾ, ಕಾರಾಗೃಹ ಸೇವೆಗಾಗಿ ಸುರೇಖಾ, ಬಿಸಿಎಂ ಶಾಂತಮ್ಮ, ಡಾ.ದರ್ಶಿನಿ ಅವರಿಗೆ ರಾಷ್ಟ್ರ ಮಾತಾ ಅಹಲ್ಯಾ ಬಾಯಿ ಹೋಳ್ಕರ್ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.
ಅಹಲ್ಯಾ ಬಾಯಿ ಹೋಳ್ಕರ್ ಮಹಿಳಾ ಸಾಂಸ್ಕೃತಿಕ ಪರಿಷತ್ತು ಮಂಡ್ಯ ಜಿಲ್ಲಾಧ್ಯಕ್ಷೆ ಸಾವಿತ್ರಮ್ಮ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನನ್ನು ಅಹಲ್ಯಾ ಬಾಯಿ ಹೋಳ್ಕರ್ ಮಹಿಳಾ ಸಾಂಸ್ಕೃತಿಕ ಪರಿಷತ್ತುಗೆ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ಜಿಲ್ಲೆಯಲ್ಲಿ ಸಂಘಟನೆ ಮಾಡುವಂತೆ ತಿಳಿಸಿದ್ದಾರೆ.ಈ ಬಾರಿ ಮಂಡ್ಯದಲ್ಲಿ ವಿಜೃಂಭಣೆಯಿಂದ ಅಹಲ್ಯಾ ಬಾಯಿ ಹೋಳ್ಕರ್ ಅವರ 300 ನೇ ಜಯಂತಿಯನ್ನು ಆಚರಿಸುತ್ತಿದ್ದೇವೆ ಎಂದರು.
ಅಹಲ್ಯಾ ಬಾಯಿ ಹೋಳ್ಕರ್ ಅವರ ಸಾಧನೆಯನ್ನು ಮುಂದಿನ ಪೀಳಿಗೆಗೆ ತಿಳಿಸುವ ಕೆಲಸ ಮಾಡುತ್ತಿದ್ದೇವೆ. ಜಿಲ್ಲೆಯಲ್ಲಿ ಹೆಣ್ಣು ಮಕ್ಕಳಿಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.
ಸಭೆಯಲ್ಲಿ ಲೋಲಾಕ್ಷಿ, ರೇಖಾ ಲೋಕೇಶ್,ಮೀನಾ ಚಂದ್ರಶೇಖರ್, ವೈಷ್ಣವಿ,ಶಶಿಕಲಾ,ನಗರಸಭಾ ಮಾಜಿ ಸದಸ್ಯ ಮಹೇಶ್, ಚನ್ನರಾಮು ಇದ್ದರು




