Thursday, September 19, 2024

ಪ್ರಾಯೋಗಿಕ ಆವೃತ್ತಿ

ಅತಿಥಿ ಉಪನ್ಯಾಸಕರ ಸೇವೆ ವಿಸ್ತರಿಸಿ : AIDSO ಆಗ್ರಹ

ಡಿಸೆಂಬರ್ 31ಕ್ಕೆ ರಾಜ್ಯದ ಅತಿಥಿ ಉಪನ್ಯಾಸಕರ ಸೇವೆಯನ್ನು ಕೊನೆಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆದರೆ, ವಾಸ್ತವದಲ್ಲಿ ಮೈಸೂರು ವಿಶ್ವವಿದ್ಯಾನಿಲಯವನ್ನು ಒಳಗೊಂಡಂತೆ ರಾಜ್ಯದ ಹಲವು ವಿಶ್ವವಿದ್ಯಾಲಯಗಳಲ್ಲಿ ಪದವಿ ಮೊದಲ ಸೆಮಿಸ್ಟರ್ ನ ಪಾಠಗಳು ಇನ್ನೂ ಮುಗಿದಿಲ್ಲ. ಆದ್ದರಿಂದ ಅತಿಥಿ ಉಪನ್ಯಾಸಕರ ಸೇವೆಯನ್ನು ಶೈಕ್ಷಣಿಕ ವರ್ಷದ ಅಂತ್ಯದವರೆಗೆ ವಿಸ್ತರಿಸುವಂತೆ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ (AIDSO) ಒತ್ತಾಯಿಸಿದೆ.

ಹಲವು ವಿಶ್ವವಿದ್ಯಾಲಯಗಳು ರಾಜ್ಯದ 10 ಸಾವಿರ ಅತಿಥಿ ಉಪನ್ಯಾಸಕರ ಸೇವೆಯ ಮೇಲೆಯೇ ಅವಲಂಬಿತವಾಗಿದೆ. ಅಲ್ಲದೆ, ಯು.ಯು.ಸಿ.ಎಂ.ಎಸ್. ಪೋರ್ಟಲ್ ಸಮಸ್ಯೆ ಹಾಗೂ ಇನ್ನಿತರ ಸಮಸ್ಯೆಗಳ ಕಾರಣದಿಂದಾಗಿ ಪಾಠಗಳನ್ನು ಮುಗಿಸಲು ಸಾಧ್ಯವಾಗಿಲ್ಲ. ಪರಿಸ್ಥಿತಿ ಹೀಗಿರುವಾಗ, ಏಕಾಏಕಿ ಅತಿಥಿ ಉಪನ್ಯಾಸಕರ ಸೇವೆಯನ್ನು ಶೈಕ್ಷಣಿಕ ಅವಧಿ ಮುಗಿಯುವ ಮುನ್ನವೇ ಕೊನೆಗೊಳಿಸುವುದು ಅವೈಜ್ಞಾನಿಕ ಮತ್ತು ಅದು ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಇದು ವಿದ್ಯಾರ್ಥಿಗಳು ಮತ್ತಷ್ಟು ಕಷ್ಟಕ್ಕೆ ಸಿಲುಕುವಂತೆ ಮಾಡುತ್ತದೆ ಎಂದು ಸಂಘಟನೆಯ ಮುಖಂಡರಾದ ಚಂದ್ರಿಕಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ಶೈಕ್ಷಣಿಕ ವರ್ಷದ ಅಂತ್ಯದವರೆಗೂ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯದ 10 ಸಾವಿರ ಅತಿಥಿ ಉಪನ್ಯಾಸಕರ ಸೇವೆಯನ್ನು ವಿಸ್ತರಣೆ ಮಾಡಬೇಕು, ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ ಸುಗಮವಾಗಿ ಪೂರ್ಣಗೊಳ್ಳುವಂತೆ ವಿಶ್ವವಿದ್ಯಾನಿಲಯವು ಕೂಡ ಕ್ರಮ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!