Thursday, September 19, 2024

ಪ್ರಾಯೋಗಿಕ ಆವೃತ್ತಿ

ಏಮ್ಸ್ ಸ್ಥಾಪಿಸುವುದಾಗಿ ಹೇಳಿ ಕನ್ನಡಿಗರ ಕಿವಿಗೆ ಹೂವಿಟ್ಟ ಮೋದಿ: ಸಿದ್ದರಾಮಯ್ಯ ಟೀಕೆ

ಹುಬ್ಬಳ್ಳಿ- ಧಾರವಾಡದಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರ ಸರ್ಕಾರದ ಆರೋಗ್ಯ ಸಚಿವರು ಸಮ್ಮತಿಸಿದ್ದಾರೆ ಎಂದು 2022ರಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಕನ್ನಡಿಗರ ಕಿವಿಗೆ ಹೂವಿಟ್ಟಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ ಸರಣಿ ಮುಂದುವರಿಸಿರುವ ಅವರು, “ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಭಾರತಿ ಪ್ರವೀಣ್ ಅವರು 2023ರ ಆಗಸ್ಟ್ ನಲ್ಲಿ ರಾಜ್ಯಸಭೆಗೆ ನೀಡಿರುವ ಉತ್ತರದಲ್ಲಿ ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆಯ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿಲ್ಲ ಎಂದಿದೆ” ಎಂದಿದ್ದಾರೆ.

“>

“ಪ್ರಧಾನಿ ನರೇಂದ್ರ ಮೋದಿ ಅವರೇ, ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಒತ್ತಾಯಿಸಿ ಎರಡೆರಡು ಬಾರಿ ನಿಮ್ಮ ಸರ್ಕಾರದ ಸಚಿವರಿಗೆ ಪತ್ರ ಬರೆದಿದ್ದೆ, ಈವರೆಗೆ ಸಕಾರಾತ್ಮಕ ಸ್ಪಂದನೆ ದೊರೆತಿಲ್ಲ. ಬೆಂಗಳೂರಿಗೆ ಮಂಜೂರಾದ ಏಮ್ಸ್ ಸಂಸ್ಥೆ ಕೇಂದ್ರ ಸರ್ಕಾರದ ಅನುದಾನ ಕಾಣದೆ ಘೋಷಣೆಗಷ್ಟೇ ಸೀಮಿತವಾಗಿದೆ.
ಕರ್ನಾಟಕಕ್ಕೆ ಮಾತ್ರ ಯಾಕೆ ಈ ಅನ್ಯಾಯ” ಎಂದು ಪ್ರಶ್ನಿಸಿದ್ದಾರೆ.

“ಬೆಂಗಳೂರು ನಗರದ ಜನರಿಗೆ ಸುಗಮ ಸಂಚಾರ ಸೌಲಭ್ಯ ಕಲ್ಪಿಸುವ ಸಬ್ ಅರ್ಬನ್ ರೈಲು ಯೋಜನೆಯು ಕೇಂದ್ರ ಸರ್ಕಾರದ ಅನುದಾನವಿಲ್ಲದೆ ಇನ್ನೂ ಕನ್ನಡಿಗರ ಕನಸಾಗಿಯೇ ಉಳಿದಿದೆ. ಪ್ರಧಾನಿ ಮೋದಿ ಅವರೇ,
ಯಾಕೆ ಕನ್ನಡಿಗರಿಗೆ ಭರವಸೆ ನೀಡಿ ಈ ರೀತಿ ಪದೇ ಪದೇ ವಂಚಿಸುತ್ತಿದ್ದೀರಿ?” ಎಂದು ಕುಟುಕಿದ್ದಾರೆ.

“ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕಾದ ನಷ್ಟ ತುಂಬಿಕೊಡಲು 15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ರೂ.5,495 ಕೋಟಿ ವಿಶೇಷ ಅನುದಾನ ನೀಡುವಂತೆ ಶಿಫಾರಸು ಮಾಡಿತ್ತು. ನಮ್ಮದೇ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿ, ವಿತ್ತ ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು ಶಿಫಾರಸನ್ನು ತಿರಸ್ಕರಿಸಿ, ನಾಡದ್ರೋಹ ಎಸಗಿದರು. ಪ್ರಧಾನಿ ಮೋದಿ ಅವರೇ, ಮೋದಿ ಮುಖ ನೋಡಿ ಮತ ನೀಡಿ ಎನ್ನುವ ನಿಮ್ಮವರ ಅನ್ಯಾಯಕ್ಕೆ ಕನ್ನಡಿಗರು ಯಾರ ಬಳಿ ನ್ಯಾಯ ಕೇಳಬೇಕು?” ಎಂದಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!