Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಆ.29ಕ್ಕೆ ‘ಆಕೃತಿ’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ

ಮಂಡ್ಯ ಜಿಲ್ಲೆಯ ಮೊದಲ ಪ್ಲಾಸ್ಟಿಕ್ ಸರ್ಜರಿ ಹಾಗೂ ಎಂಡೋಕ್ರೈನ್ ಹೊಂದಿರುವ ಸೂಪರ್ ಸ್ಪೆಷಾಲಿಟಿ ವ್ಯವಸ್ಥೆಯ ಆಕೃತಿ ಆಸ್ಪತ್ರೆಯು ಆಗಸ್ಟ್ 29ರಂದು ಬೆಳಿಗ್ಗೆ 9 ಗಂಟೆಗೆ ಪ್ರಾರಂಭಗೊಳ್ಳಲಿದೆ ಎಂದು ಮಂಡ್ಯ ರಾಷ್ಟ್ರೀಯ ಅಲಯನ್ಸ್ ಸಂಸ್ಥೆಯ ಸೌತ್ ಮಲ್ಟಿಪಲ್ ಕೌನ್ಸಿಲ್‌ನ ಅಧ್ಯಕ್ಷ ಕೆ.ಟಿ.ಹನುಮಂತು ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಸ್ಪತ್ರೆಯು ಜಿಲ್ಲೆಯ ಆಧುನಿಕ ಆರೋಗ್ಯ ಸೇವೆಯ ಕೊರತೆ ನೀಗಿಸಲಿದೆ. ತುರ್ತು ಚಿಕಿತಾ ಕೊಠಡಿ, ತೀವ್ರ ನಿಗಾ ಘಟಕ ಸೇರಿದಂತೆ ಸ್ಟೇನ್ಲೆಸ್ ಸ್ಟೀಲ್ ಮಾಡ್ಯುಲರ್ ಆಪರೇಷನ್ ಥಿಯೇಟರ್ ಸೌಲಭ್ಯ ಹೊಂದಿದೆ ಎಂದರು.

ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ಪ್ರಾರಂಭೋತ್ಸವದ ದಿವ್ಯಸಾನಿಧ್ಯ ವಹಿಸಿ, ಉದ್ಘಾಟಿಸುವರು. ಅತಿಥಿಗಳಾಗಿ ಪಂಚಾಯತ್ ರಾಜ್ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಅಸ್ಸಾಂನ ಗೋಲ್ಪಾರ ಜಿಲ್ಲಾ ಅರಣ್ಯಾಧಿಕಾರಿ ತೇಜಸ್ ಮರಿಸ್ವಾಮಿ, ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್, ಮಿಮ್ಸ್ ನಿರ್ದೇಶಕ ಡಾ.ಪಿ.ನರಸಿಂಹಸ್ವಾಮಿ, ಅಲಯನ್ಸ್ ಕ್ಲಬ್‌ಗಳ ಅಂತರಾಷ್ಟ್ರೀಯ ನಿರ್ದೇಶಕ ಡಾ.ನಾಗರಾಜ ವಿ.ಭೈರಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಪ್ಲಾಸ್ಟಿಕ್ ಸರ್ಜರಿ ತಜ್ಞೆ ಡಾ.ಸೊನಾಲಿ ಉಚ್ಚಿಲ್ ಮಾತನಾಡಿ, ಆಕೃತಿ ಆಸ್ಪತ್ರೆಯಲ್ಲಿ ದಿನದ 24 ಗಂಟೆಗಳು ಆರೋಗ್ಯ ಸೇವೆ ಲಭ್ಯವಿದೆ. ಪ್ಲಾಸ್ಟಿಕ್ ಸರ್ಜರಿ ಮತ್ತು ಎಂಡೋಕ್ರೈನ್ ಚಿಕಿತ್ಸೆಗಾಗಿ ಮೈಸೂರು-ಬೆಂಗಳೂರಿಗೆ ಅಲೆಯುವ ಸಮಯದಲ್ಲಿ ಚಿಕಿತ್ಸೆ ಆರಂಭಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಸ್ಟೇನ್ಲೆಸ್ ಸ್ಟೀಲ್ ಆಂಟಿಬ್ಯಾಕ್ಟೀರಿಯಲ್ ಮಾಡ್ಯುಲರ್ ಆಪರೇಷನ್ ಥಿಯೇಟರ್‌ನ ಸಾಮಗ್ರಿಗಳು ಬ್ಯಾಕ್ಟೀರಿಯ ನಿರೋಧಕವಾಗಿದ್ದು, ಸುಲಭವಾಗಿ ಸ್ವಚ್ಛಗೊಳಿಸಬಹುದಾಗಿದೆ. ಇದರಿಂದ ಶಸ್ತ್ರಚಿಕಿತ್ಸೆಯ ವೇಳೆ ಸೋಂಕಿನ ಅಪಾಯ ಕಡಿಮೆ ಮಾಡುತ್ತದೆ ಎಂದು ಮಾಹಿತಿ ಹಂಚಿಕೊಂಡರು.

ಗೋಷ್ಠಿಯಲ್ಲಿ ಎಂಡೋಕ್ರೈನ್ ತಜ್ಞೆ ಡಾ.ಶೃತಿ, ಅರವಳಿಕೆ ತಜ್ಞ ಡಾ.ಕೆ.ಸಿ.ಸುಹಾರ್, ಅಲಯನ್ಸ್ 2ನೆ ಜಿಲ್ಲಾ ರಾಜ್ಯಪಾಲ ಕೆ.ಎಸ್.ಚಂದ್ರಶೇಖರ್, ಪ್ರೊ.ಶಿವಕುಮಾರ್ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ