Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಕುಮಾರಸ್ವಾಮಿ ಬೆಂಬಲಿಸಲು ಮನವಿ

ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಅವರನ್ನು ಬೆಂಬಲಿಸುವಂತೆ ಮಾಜಿ ಸಚಿವ ಆಲ್ಕೋಡ್ ಹನುಮಂತಪ್ಪ ಮನವಿ ಮಾಡಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದಾರೆ. ಶೈಕ್ಷಣಿಕವಾಗಿ ಹಲವಾರು ಕೊಡುಗೆ ನೀಡಿದ್ದಾರೆ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡುವ ಮೂಲಕ ಹೊಸ ಪರಂಪರೆ ಹುಟ್ಟು ಹಾಕಿದ್ದಾರೆ ಎಂದರು .

ಅನುಭವಿ ರಾಜಕಾರಣಿಯನ್ನು ಲೋಕಸಭೆಗೆ ಕಳುಹಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಇಂತಹ ಸುವರ್ಣ ಅವಕಾಶವನ್ನು ಕಳೆದುಕೊಳ್ಳದೆ ಕುಮಾರಸ್ವಾಮಿ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಗೋಷ್ಠಿಯಲ್ಲಿ ಜೆಡಿಎಸ್ ಮುಖಂಡ ಸಿ ಕೆ ಪಾಪಯ್ಯ, ಬಿಜೆಪಿ ಮುಖಂಡ ಮಂಜುನಾಥ್, ಅನಿಲ್ ಕುಮಾರ್ , ಸಂತೋಷ್, ಪುಟ್ಟರಾಜು, ಸಿದ್ದರಾಜು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!