Tuesday, October 22, 2024

ಪ್ರಾಯೋಗಿಕ ಆವೃತ್ತಿ

ಕೊಪ್ಪಳ| ಕಾಲೇಜು ವಿದ್ಯಾರ್ಥಿನಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ

ಬಳ್ಳಾರಿಯ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ, ಆಕೆಗೆ ಮದ್ಯ ಕುಡಿಸಿ ನಾಲ್ವರು ವಿಕೃತ ಕಾಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ವಿದ್ಯಾರ್ಥಿಯನ್ನು ಆಕೆಯ ಸ್ನೇಹಿತ ಸೇರಿದಂತೆ ನಾಲ್ವರು ಕಾಮುಕರು ಆಟೋದಲ್ಲಿ ಅಪಹರಿಸಿ, ಕೊಪ್ಪಳದ ಸಣಾಪುರ ಬಳಿಕ ಹೋಟೆಲ್‌ ಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ.

ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಕಾಲೇಜಿಗೆ ತೆರಳಿದ್ದರು. ಈ ವೇಳೆ, ಆಕೆಯ ಅಣ್ಣ ಬಂದಿದ್ದಾನೆಂದು ಹೇಳಿ ಆಕೆಯ ಸ್ನೇಹಿತ ಹೇಳಿದ್ದಾನೆ. ಹೊರಗೆ ಬಂದ ವಿದ್ಯಾರ್ಥಿನಿಯನ್ನು ಆಕೆಯ ಸ್ನೇಹಿತ ಹಾಗೂ ಮೂವರು ಆರೋಪಿಗಳು ಆಟೋದಲ್ಲಿ ಅಪಹರಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಸಣಾಪುರ ಬಳಿಯ ಅಂತರಾಳ ಕೆಫೆ ಹೋಟೆಲ್​ಗೆ ಎಳೆದೊಯ್ದಿದ್ದಾರೆ. ಅಲ್ಲಿ, ಆಕೆಗೆ ಬಿಯರ್ ಕುಡಿಸಿ ಅತ್ಯಾಚಾರ ಎಸಗಿದ್ದಾರೆ.

ಸಂತ್ರಸ್ತ ಯುವತಿ ಬಳ್ಳಾರಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಾಮೂಹಿಕ ಅತ್ಯಾಚಾರ ಎಸಗಿರುವ ಕಾಮುಕ ನಮೀನ್, ಸಾಕೀಬ್, ತನು ಮತ್ತು ಮತ್ತೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!