Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಗಗನಚುಕ್ಕಿ ಜಲಪಾತೋತ್ಸವಕ್ಕೆ ಸಕಲ ಸಿದ್ದತೆ- ನರೇಂದ್ರಸ್ವಾಮಿ

ಪ್ರಕೃತ್ತಿ ದತ್ತವಾಗಿ ಚಲುವನ್ನು ಹೊಂದಿರುವ ಗಗನಚುಕ್ಕಿಗೆ ಜನರನ್ನು ಸೆಳೆಯಲು ವಿಜೃಂಭಣೆಯಿಂದ ಜಲಪಾತೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 14 ಹಾಗೂ 15 ರಂದು ಹಮ್ಮಿಕೊಳ್ಳಲಾಗಿದೆ. ರೊಟ್ಟಿಕಟ್ಟೆಯಿಂದ ಎರಡು ರಸ್ತೆ ಬದಿಗಳು ಮದುವಣಗಿತ್ತಿಯ ರೂಪದಲ್ಲಿವ ಅಲಂಕೃತವಾಗಿ ಜನರನ್ನು ಜಲಪಾತೋತ್ಸವಕ್ಕೆ ಆತ್ಮೀಯವಾಗಿ ಆಹ್ವಾನಿಸುತ್ತಿದೆ.

ಸೆಪ್ಟೆಂಬರ್ 14 ರಂದು ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ, ಜಲಪಾತೋತ್ಸವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಹೆಚ್ಚು ಜನರು ಭಾಗವಹಿಸುವಂತೆ ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಸ್ಪೆಷಲ್ ರೂಟ್ ಗಳಲ್ಲಿ ಬಸ್ ಮಳವಳ್ಳಿ ತಾಲ್ಲೂಕಿನ ವಿವಿಧ ಭಾಗಗಳಿಂದ ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮಕ್ಕೆ ಸಾರ್ವಜನಿಕರು ಬಂದು ಹೋಗಲು ಕೆ‌ಎಸ್.ಆರ್.ಟಿ.ಸಿ ವತಿಯಿಂದ ವಿಶೇಷ ಬಸ್ ರೂಟ್ ಗಳ ವ್ಯವಸ್ಥೆ ಮಾಡಲಾಗಿದೆ. ರೊಟ್ಟಿಕಟ್ಟೆಯಿಂದ ಕಾರ್ಯಕ್ರಮ ನಡೆಯುವ ಸ್ಥಳಗಳವರೆಗೆ ಸಾರ್ವಜನಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದರು.

ವಿಶೇಷ ದೀಪ ಅಲಂಕಾರ ಸೆಪ್ಟೆಂಬರ್‌ 14 ಹಾಗೂ 15 ರಂದು ಜಲಪಾತಕ್ಕೆ ವಿಶೇಷ ದೀಪಾಲಂಕಾರ ಹಾಗೂ ಲೇಜರ್ ಶೋ ವ್ಯವಸ್ಥೆ. ಬರುವ ಸಾರ್ವಜನಿಕರಿಗೆ ಉಚಿತ ಉಪಹಾರ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು.

ಬೆಳದಿಂಗಳ ಕಾರ್ಯಕ್ರಮ ಪ್ರಕೃತಿ ತಾಣವಾದ ಗಗನಚುಕ್ಕಿ ಜಲಪಾತದ ಮುಂಭಾಗ ದೊಡ್ಡದಾದ ಮೆಟ್ಟಿಲು ಹಾಗೂ ಆವರಣ ನಿರ್ಮಾಣವಾಗುತ್ತಿದ್ದು, ಇಲ್ಲಿ ಮುಂದಿನ ದಿನಗಳಲ್ಲಿ ಸಾರ್ವಜನಿಕರು ಹಾಗೂ ಶಾಲಾ ಕಾಲೇಜಿನವರು ವಿಶೇಷ ಬೆಳದಿಂಗಳ ಕಾರ್ಯಕ್ರಮ ಹಮ್ಮಿಕೊಳ್ಳಲು ಅವಕಾಶ ನೀಡಲಾಗುವುದು ಎಂದರು‌

ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ

ಇದಲ್ಲದೇ ಸುತ್ತ ನೀರಿರುವ ಐಲ್ಯಾಂಡ್ ಪ್ರದೇಶ ಗಗನ ಚುಕ್ಕಿಯಲ್ಲಿದ್ದು, ಇಲ್ಲಿ ಸುತ್ತ ವಾಕಿಂಗ್ ಪಾಥ್ ನಿರ್ಮಿಸಲು ಟನಲ್ ಅಕ್ವೇರಿಯಂ, ಸೇರಿದಂತೆ ಜಲ ಕ್ರೀಡೆ ಸಹ ನಡೆಸಲು ಅವಕಾಶವಿದ್ದು, ಈ ಯೋಜನೆಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಸ್ಥಳೀಯ ಕಲಾವಿದರಿಗೂ ಅವಕಾಶ ಗಗನಚಯಕ್ಕಿ ಜಲಪಾತೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಗೂ ಅವಕಾಶ ನೀಡಲಾಗಿದೆ. ಸೆ.14 ರಂದು ಬೆಳಿಗ್ಗೆ 11 ಗಂಟೆಗೆ ಸಂಕೇತಿಕವಾಗಿ ಕಲಾತಂಡಗಳ ಮೆರವಣಿಗೆಯೊಂದಿಗೆ ಚಾಲನೆ ನೀಡಲಾಗುವುದು. ಎರಡು ದಿನಗಳ ಕಾಲ ಬೆಳಿಗ್ಗೆ 11 ರಿಂದ 2 ರವರೆಗೆ ಸ್ಥಳೀಯ ಕಲಾವಿದರಿಗೆ ಕಾರ್ಯಕ್ರಮ ನೀಡಲಿದ್ದಾರೆ ಎಂದರು.

ಎರಡು ದಿನಗಳ ಕಾರ್ಯಕ್ರಮದ ವಿವರ

ಸೆಪ್ಟೆಂಬರ್ 14 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 2 ಗಂಟೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮದ್ಯಾಹ್ನ 2 ಗಂಟೆಯಿಂದ ಸಂಜೆ 4.30 ಗಂಟೆವರೆಗೆ ನಾಗೇಶ್ ಕಂದೇಕಾಲ ಮತ್ತು (ಕಲಾವತಿ ದಯಾನಂದ್, ಅಜಯ್ ವಾರಿಯರ್, ಜೋಗಿ ಸುನಿತಾ, ಚಿಂತನ್ ವಿಕಾಸ್, ಸುಹನಾ ಸೈಯದ್) ಇವರಿಂದ ಭಾವಗೀತೆಗಳು ನಡೆಯಲಿವೆ. ಸಂಜೆ 4.30 ರಿಂದ 6 ಗಂಟೆವರೆಗೆ ಪ್ರಖ್ಯಾತ ಕಾಮಿಡಿ ಕಿಲಾಡಿಗಳು ಕಲಾವಿದರಿಂದ ಹಾಸ್ಯ ಮನರಂಜನೆ ಕಾರ್ಯಕ್ರಮಗಲು, ಸಂಜೆ 7 ಗಂಟೆಯಿಂದ ರಾತ್ರಿ 10.30 ರವರೆಗೆ ಮಣಿಕಾಂತ್ ಕದ್ರಿ, ಚಂದನ್ ಶೆಟ್ಟಿ, ಹಂಸಿಕಾ ಅಯ್ಯರ್ ತಂಡದವರಿಂದ ನೃತ್ಯ ಮತ್ತು ಸಂಗೀತ ಕಾರ್ಯಕ್ರಮ ನಡೆಯಲಿದೆ.

ಸೆ.15 ರಂದು ಕಾರ್ಯಕ್ರಮ 

ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 2 ಗಂಟೆವರೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಮದ್ಯಾಹ್ನ 2 ರಿಂದ ಸಂಜೆ 4.30 ಗಂಟೆವರೆಗೆ ಪ್ರಖ್ಯಾತ ಜಿ-ಸರಿಗಮಪ ತಂಡದವರಿಂದ ಸಂಗೀತ ಕಾರ್ಯಕ್ರಮ, ಸಂಜೆ 4.30 ರಿಂದ 6 ಗಂಟೆವರೆಗೆ ಪ್ರಖ್ಯಾತ ಕಲರ್ಸ್-ಗಿಚ್ಚಿ ಗಿಲಿಗಿಲಿ ತಂಡದವರಿಂದ ಹಾಸ್ಯ ಕಾರ್ಯಕ್ರಮ, 6 ರಿಂದ ರಾತ್ರಿ 10.30 ಗಂಟೆವರೆಗೆ ರವಿ ಬಸ್ರೂರ್ ಮತ್ತು ತಂಡದವರಿಂದ ಸಂಗೀತ ರಸ ಸಂಜೆ ಕಾರ್ಯಕ್ರಮಗಳು ನಡೆಯಲಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!