Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜವಾಹರ್ ನವೋದಯ ವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ

ಮಂಡ್ಯ ತಾಲೂಕಿನ ಶಿವಾರ ಗುಡ್ಡದ ಜವಾಹರ್ ನವೋದಯ ವಿದ್ಯಾಲಯದ ಹಳೆಯ ವಿದ್ಯಾರ್ಥಿಗಳಿಂದ ಜುಲೈ 21ರಂದು ಬೆಳಿಗ್ಗೆ 10 ಗಂಟೆಗೆ ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಭವ್ಯ ಸಮ್ಮಿಲನ, ಗುರುವಂದನೆ ಹಾಗೂ ,ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ನವೋದಯ ವಿದ್ಯಾಲಯದ ಹಳೆಯ ವಿದ್ಯಾರ್ಥಿ ಅಶ್ವಿನ್ ಕುಮಾರ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10.30 ಗಂಟೆಗೆ ನೆಚ್ಚಿನ ಗುರುಗಳು ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ನಾಗರಾಜು ಸೇರಿದಂತೆ ತಮಗೆ ವಿದ್ಯೆ ನೀಡಿದ ಎಲ್ಲಾ ಗುರುಗಳನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಮಧ್ಯಾಹ್ನ 2.30ಕ್ಕೆ ಶಿಕ್ಷಕರಾದ ನಾಗರಾಜ್ ಅವರ ಚೊಚ್ಚಲ ಕಾದಂಬರಿ ಅಬ್ಬೆಪಾರಿ ಕೃತಿಯನ್ನು ಬಿಡುಗಡೆ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಆದ್ದರಿಂದ ನವೋದಯ ಶಾಲೆಯ ಹಳೆಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಗೋಷ್ಠಿಯಲ್ಲಿ ಹಿರಿಯ ವಿದ್ಯಾರ್ಥಿಗಳಾದ ಆನಂದ್, ವೆಂಕಟೇಶ್, ಮಂಜುನಾಥ್ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ