ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹುಟ್ಟಿದ ದಿನ ಏ.14ರಂದು ಭಾರತದಾದ್ಯಂತ ಸಾರ್ವತ್ರಿಕ ಘೋಷಿಸಿ, ಕೇಂದ್ರ ಸರ್ಕಾರ ಪ್ರಕಟಣೆ ಹೊರಡಿಸಿದೆ.
ಅಂದು ಭಾರತದಾದ್ಯಂತ ಕೈಗಾರಿಕಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಸೋಮವಾರ ಅಂದರೆ, ಏಪ್ರಿಲ್ 14 ರಂದು ರಜೆ ಘೋಷಿಸಲು ನಿರ್ಧರಿಸಲಾಗಿದೆ. ಭಾರತ ಸರ್ಕಾರದ ಎಲ್ಲಾ ಸಚಿವಾಲಯಗಳು/ಇಲಾಖೆಗಳು ಮೇಲಿನ ನಿರ್ಧಾರವನ್ನು ಸಂಬಂಧಪಟ್ಟ ಎಲ್ಲರ ಗಮನಕ್ಕೆ ತರಲು ಸೂಚನೆ ನೀಡಲಾಗಿದೆ.
ಈ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಏಪ್ರಿಲ್ 14, 2025 ರಂದು ಎಲ್ಲಾ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ರಾಷ್ಟ್ರವ್ಯಾಪಿ ರಜಾದಿನವೆಂದು ಘೋಷಿಸುವ ನಿರ್ಧಾರವು ಡಾ. ಬಿ.ಆರ್. ಅಂಬೇಡ್ಕರ್ ಅವರ ಅಪಾರ ಕೊಡುಗೆಗಳಿಗೆ ಅರ್ಹವಾದ ಗೌರವವಾಗಿದೆ. ಈ ಚಿಂತನಶೀಲ ನಿರ್ಧಾರವನ್ನು ನಾನು ಪ್ರಾಮಾಣಿಕವಾಗಿ ಪ್ರಶಂಸಿಸುತ್ತೇನೆ. ಡಾ. ಅಂಬೇಡ್ಕರ್ ಅವರ ಸಮಾನತೆ, ನ್ಯಾಯ ಮತ್ತು ಸಬಲೀಕರಣದ ದೃಷ್ಟಿಕೋನವು ನಮ್ಮ ರಾಷ್ಟ್ರವನ್ನು ರೂಪಿಸುತ್ತಲೇ ಇದೆ. ನಮ್ಮ ಸಂವಿಧಾನ ಶಿಲ್ಪಿಗೆ ಗೌರವ ಸಲ್ಲಿಸುವ ಈ ಅರ್ಥಪೂರ್ಣ ಕಾರ್ಯಕ್ಕಾಗಿ ಗೌರವಾನ್ವಿತ ಪ್ರಧಾನಿ ಮೋದಿಯವರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದಿ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.




