Wednesday, July 24, 2024

ಪ್ರಾಯೋಗಿಕ ಆವೃತ್ತಿ

ಡಾ.ರವೀಂದ್ರರಿಗೆ ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ಬೆಂಬಲ

ಜೂ.13ರಂದು ನಡೆಯಲಿರುವ ದಕ್ಷಿಣ ಪದವೀಧರ ಕ್ಷೇತ್ರದ ಚುನಾ ವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಡಾ. ಜೆಸಿ ರವೀಂದ್ರರಿಗೆ ಡಾ. ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ಬೆಂಬಲ ನೀಡಲಿದೆ ಎಂದು ರಾಜ್ಯಾಧ್ಯಕ್ಷ ಕೃಷ್ಣ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಉನ್ನತ ವ್ಯಾಸಂಗ ಮುಗಿಸಿ ಅತಿಥಿ ಉಪನ್ಯಾಸಕರಾಗಿ ಕಳೆದ 14ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಹಾಗೂ ಅತಿಥಿ ಉಪನ್ಯಾಸಕರ ಪರವಾಗಿ ಎಲ್ಲಾ ರೀತಿಯ ಹೋರಾಟ ಗಳಲ್ಲಿ ಸಕ್ರಿಯವಾಗಿ ದುಡಿಯುತ್ತಿರುವ ರವೀಂದ್ರರಿಗೆ ಪದವೀಧರರು ಮತ ನೀಡಬೇಕೆಂದು ಮನವಿ ಮಾಡಿದರು.

ಡಾ. ರವೀಂದ್ರ ಜೆ.ಸಿ. ರವರ ಕಾರ್ಯಕ್ಷಮತೆ, ದಕ್ಷತೆ, ಅರ್ಹತೆ, ಪ್ರಾಮಾಣಿಕತೆ, ದೂರದರ್ಶಿತ್ವ ಇದೆಲ್ಲವುದರ ಆಧಾರದ ಮೇಲೆ ಡಾ. ಅಂಬೇಡ್ಕರ್ ಪೀಪಲ್ಸ್ ಪಾರ್ಟಿಯು ಡಾ. ರವೀಂದ್ರ ಜೆ.ಸಿ. ರವರಿಗೆ ಬೇಷರತ್ ಬೆಂಬಲ ನೀಡುತ್ತಿದೆ ಎಂದರು.

ಅಭ್ಯರ್ಥಿ ಡಾ.ರವೀಂದ್ರ ಮಾತನಾಡಿ, ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವಾ ಸಕ್ರಮಾತಿಗೆ ಆದ್ಯತೆ ನೀಡುವುದು.

ಪಿ.ಯು. ಕಾಲೇಜಿ ನಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 40 ಸಾವಿರದಂತೆ 12 ತಿಂಗಳ ಗೌರವಧನ ಹಾಗೂ ನೇಮಕಾತಿಯಲ್ಲಿ ಶೇ.50 ಹುದ್ದೆಗಳನ್ನು ಮೀಸಲಿಡುವಂತೆ ಆದ್ಯತೆ ನೀಡುವುದು.

ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರದಲ್ಲೂ ಸರ್ಕಾರಿ ಶಾಲಾ/ಕಾಲೇಜುಗಳ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ವೇತನ ಹಾಗೂ ಇತರ ಸೌಲಭ್ಯವನ್ನು ನೀಡುವಂತೆ ಆದ್ಯತೆ ನೀಡುವುದು ನಮ್ಮ ಉದ್ದೇಶವಾಗಿದ್ದು,ನನಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧ್ಯಕ್ಷ ಹೆಚ್.ಜಿ.ಗಂಗರಾಜು, ಶಿವಕುಮಾರ್, ಅರುಣ್, ಮಹೇಶ್ ಗೋಷ್ಟಿಯಲ್ಲಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!