Friday, September 20, 2024

ಪ್ರಾಯೋಗಿಕ ಆವೃತ್ತಿ

ಸ್ವಾತಂತ್ರ್ಯ ದಿನಾಚರಣೆಗೂ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ: ಸರ್ಕಾರದ ಆದೇಶ

ಜನವರಿ 26ರ ಗಣರಾಜ್ಯೋತ್ಸವ ದಿನ ಸೇರಿದಂತೆ ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ಮಹಾತ್ಮ ಗಾಂಧೀಜಿ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕ‌ರ್ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ರಾಜ್ಯ ಸರ್ಕಾರ ಆದೇಶ ಹೊರಟಿಸಿದೆ.

ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಎಲ್ಲಾ ಸರ್ಕಾರಿ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಜಯಕುಮಾರ್ ಹೆಚ್.ಬಿ ಆದೇಶ ಹೊರಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!