Saturday, November 21, 2026

ಪ್ರಾಯೋಗಿಕ ಆವೃತ್ತಿ

ಗುಡಿ, ಚರ್ಚ್, ಮಸೀದಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಲು ಆಗ್ರಹ

ರಾಜ್ಯದಲ್ಲಿರುವ ಎಲ್ಲಾ ಗುಡಿ, ಚರ್ಚ್, ಮಸೀದಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಸುವುದನ್ನು ಕಡ್ಡಾಯಗೊಳಿಸಬೇಕು ಎಂದು ಡಾ.ರಾಮ ಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ದಡದಪುರ ಬಿ.ಎಸ್. ಶಿವಣ್ಣ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಅಂಬೇಡ್ಕರ್ ನೀಡಿರುವ ಸಂವಿಧಾನದ ಪ್ರಕಾರವೇ ನ್ಯಾಯಾಲಯಗಳು ಪ್ರತಿನಿತ್ಯ ಕಾರ್ಯನಿರ್ವಹಿಸುತ್ತವೆ. ನ್ಯಾಯಾಧೀಶರೆಲ್ಲರೂ ಸಂವಿಧಾನ ಓದುತ್ತಾರೆ. ಆದರೆ ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಸದೆ ಇರುವುದು ದುರದೃಷ್ಟಕರ. ಹೈಕೋರ್ಟ್ ಆದೇಶದ ಮೂಲಕ ಇನ್ನು ಮುಂದಾದರೂ ನ್ಯಾಯಾಂಗ ವ್ಯವಸ್ಥೆಯ ಕಚೇರಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಸಬೇಕು ಎಂದು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

‘ರಾಜ್ಯ ಸರ್ಕಾರವೇ ಸಂವಿಧಾನದ ಪ್ರತಿಗಳನ್ನು ದೇವಾಲಯ, ಚರ್ಚ್, ಮಸೀದಿ, ಬಸದಿ, ಗುರುದ್ವಾರಗಳಿಗೆ ಉಚಿತವಾಗಿ ಪೂರೈಕೆ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ