Monday, November 23, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ವರ್ಷದೊಳಗೆ ಅಂಬೇಡ್ಕರ್ ಪುತ್ಥಳಿ ನಿರ್ಮಾಣ : ನರೇಂದ್ರಸ್ವಾಮಿ

ಅಂಬೇಡ್ಕರ್ ಪುತ್ಥಳಿ ಜೊತೆಗೆ ವೃತ್ತವನ್ನು 1 ವರ್ಷದೊಳಗೆ ನಿರ್ಮಾಣ ಮಾಡುವುದಾಗಿ ಶಾಸಕ ಪಿ.ಎಂ ನರೇಂದ್ರಸ್ವಾಮಿ ಭರವಸೆ ನೀಡಿದರು.

ಮಳವಳ್ಳಿ ಪಟ್ಟಣದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಹಾರ ಹಾಕುವ ಮೂಲಕ ಅಂಬೇಡ್ಕರ್ ಪರಿನಿಬ್ಬಾಣ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದ ಅವರು , ಡಿ.6 ರಂದು ನಮ್ಮೆಲ್ಲರ ಆರಾಧ್ಯದೈವ ಅಂಬೇಡ್ಕರ್ ರವರನ್ನು ಕಳೆದುಕೊಂಡ ದಿನ, ಭಾರತ ದೇಶಕ್ಕೆ ವಿಶಿಷ್ಟವಾದ ಸಂವಿಧಾನವನ್ನು ಕೊಟ್ಟ ಮಹಾನ್ ಪುರುಷರು ಡಾ.ಬಿ ಆರ್ ಅಂಬೇಡ್ಕರ್, ಅವರನ್ನು ದೇಶದ ಪ್ರತಿಯೊಬ್ಬ ಜನರು ಪ್ರತಿ ದಿನ ನೆನಪು ಮಾಡಿಕೊಳ್ಳಬೇಕಾಗಿದೆ. ಎಂದರು.

ಅಂಬೇಡ್ಕರ್ ರಚಿಸಿದ ಸಂವಿಧಾನದಲ್ಲಿ ಎಲ್ಲರಿಗೂ ಹಕ್ಕು ಮತ್ತು ಜವಾಬ್ದಾರಿ ನೀಡಲಾಗಿದೆ. ನಾಗರಿಕರ ಹಕ್ಕುಗಳನ್ನು ಪ್ರತಿಪಾದಿಸುವುದರ ಜತೆಗೆ ಗುರುತರ ಜವಾಬ್ದಾರಿ ನಿರ್ವಹಿಸಬೇಕಿದೆ. ಯುವಜನರು ಸಂವಿಧಾನದ ಆಶಯಗಳನ್ನು ಅರ್ಥೈಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು. ಇದೇ ವೇಳೆಯಲ್ಲಿ ತಾಲೂಕಿನ ವಿವಿಧ ಸಂಘಟನೆಗಳ ವತಿಯಿಂದ ಅಂಬೇಡ್ಕರ್ ವೃತ್ತವನ್ನು ನಿರ್ಮಾಣ ಮಾಡಬೇಕೆಂದು ಶಾಸಕರಿಗೆ ಮನವಿ ನೀಡಿದರು.

ಈ ವೇಳೆ ಮನ್ ಮುಲ್ ನಿರ್ದೇಶಕ ವಿಶ್ವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ ರಾಜು, ದೊಡ್ಡಯ್ಯ, ತಹಸೀಲ್ದಾರ್ ಡಾ.ಲೋಕೇಶ್, ಡಿವೈಎಸ್ ಪಿ ಕೃಷ್ಣಪ್ಪ, ತಾಲ್ಲೂಕು ಪಂಚಾಯಿತಿ ಇ ಒ ಶ್ರೀನಿವಾಸ್,ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯಚೇತನ ನಾಯಕ್.ಕಿರಣ್ ಶಂಕರ, ಚೇತನಕುಮಾರ್ ಸೇರಿದಂತೆ ಹಲವರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ