ಧಮ್ಮವಿಜಯ ಬುದ್ಧವಿಹಾರ ಟ್ರಸ್ಟ್ ವತಿಯಿಂದ ಮಂಡ್ಯನಗರದ ಗಾಂಧಿನಗರ ೧೦ನೇ ಅಡ್ಡರಸ್ತೆಯ ಡಾ.ಬಿ.ಆರ್.ಅಂಬೇಡ್ಕರ್ ಆಟೋ ನಿಲ್ದಾಣದ ಬಳಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೬೯ನೇ ಪರಿನಿಬ್ಬಾಣದ ಅಂಗವಾಗಿ ನುಡಿ ನಮನ ಸಂಗೀತ ಕಾರ್ಯಕ್ರಮವನ್ನು ಡಿ.೦೬ರ ಸಂಜೆ ೭ ಗಂಟೆಗೆ ಆಯೋಜಿಸಲಾಗಿದೆ ಎಂದು ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ನಿರಂಜನ್ ಬೌದ್ಧ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಶಾಸಕ ಪಿ.ರವಿಕುಮಾರ್ಗೌಡ, ಹಾಸ್ಯ ಕಲಾವಿದ ಚಂದ್ರಪ್ರಭ ಹಾಗೂ ಕದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್ ಹಾಗೂ ಅಕ್ಕ ಐಎಎಸ್ ಅಕಾಡೆಮಿಯ ಸಂಸ್ಥಾಪಕ ಡಾ.ಶಿವಕುಮಾರ್ ಭಾಗವಹಿಸಲಿದ್ದಾರೆ ಎಂದರು.
ಇದೇ ವೇಳೆ ಹೆಸರಾಂತ ತಬಲ ವಾದಕ ವೆಂಕಟೇಶ್ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ ನೆರವೇರಲಿದೆ. ಹೆಚ್ಚಿನ ಸಂಖ್ಯೆಯ ಅಂಬೇಡ್ಕರ್ ಅಭಿಮಾನಿಗಳು ಭಾಗವಹಿಸುವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಶಿವಶಂಕರ್, ಮೋಹನ್ಕುಮಾರ್, ವೆಂಕಟಾಚಲಯ್ಯ ಇದ್ದರು.




