Thursday, September 19, 2024

ಪ್ರಾಯೋಗಿಕ ಆವೃತ್ತಿ

ಫೆ.2ರಂದು ಅಂಬಿಗರ ಚೌಡಯ್ಯ ಜಯಂತ್ಯೋತ್ಸವ

ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಗಂಗಾಮತಸ್ಥರ ಸಂಘ, ಮಂಡ್ಯ ಜಿಲ್ಲಾ ಗಂಗಾಮತಸ್ಥ, ನಾಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಫೆ.2ರಂದು ಬೆಳಿಗ್ಗೆ 10.30 ಗಂಟೆಗೆ ಮಂಡ್ಯನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತ್ಯೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಜಿ.ಪಂ. ಮಾಜಿ ಅಧ್ಯಕ್ಷ ಬಿ.ಲಿಂಗಯ್ಯ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಸಮಾರಂಭ ಉದ್ಘಾಟಿಸುವರು. ರೇಷ್ಮೆ ಸಚಿವ ಡಾ.ಕೆ.ಸಿ.ನಾರಾಯಣಗೌಡ, ಶಾಸಕ ಡಾ.ಸಾಬಣ್ಣ ತಳವಾರ್, ಮಾಜಿ ಸಚಿವ ಪ್ರಮೋದ್ ಮದ್ವರಾಜ್, ಮಾಜಿ ಶಾಸಕ ತಿಪ್ಪಣ್ಣ, ಶಿವಕುಮಾರ್ ನಾಟಿಕರ್, ಜಯ ಸಿ.ಕೊಟ್ಯಾನ್ ಭಾಗವಹಿಸುವರು. ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು ಎಂದರು.

ಮುಖ್ಯ ಅತಿಥಿಗಳಾಗಿ ಸಂಸದೆ ಸುಮಲತಾ ಅಂಬರೀಶ್, ಶಾಸಕ ಮರಿತಿಬ್ಬೇಗೌಡ, ಶಾಸಕರಾದ ಸಿ.ಎಸ್. ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಸುರೇಶ್ ಗೌಡ, ಡಾ.ಕೆ.ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಮಧು ಜಿ.ಮಾದೇಗೌಡ, ದಿನೇಶ್ ಗೂಳೀಗೌಡ ಮತ್ತಿತರರು ಭಾಗವಹಿಸುವರು ಎಂದರು.

ಗೋಷ್ಠಿಯಲ್ಲಿ ಮುಖಂಡರಾದ ಈರಯ್ಯ, ಸಿದ್ದಯ್ಯ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!