Monday, November 23, 2026

ಪ್ರಾಯೋಗಿಕ ಆವೃತ್ತಿ

ಭಾರತೀಯರಿಗೆ ಅಮೆರಿಕಾ ಕೈಕೋಳ | ಮೋದಿ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

ಅಮೆರಿಕ ಸರ್ಕಾರ ಅಲ್ಲಿನ ಭಾರತೀಯ ವಲಸಿಗರ ಮೇಲೆ ನಡೆಸುತ್ತಿರುವ ಅಮಾನುಷ ಕೃತ್ಯ ಮತ್ತು ದೌರ್ಜನ್ಯವನ್ನು ತಡೆಯುವಲ್ಲಿ ವಿಫಲವಾಗಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನೆಡೆಸಿದರು.

ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ನೆಡೆಸಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಅಮೇರಿಕಾದಲ್ಲಿ ಭಾರತೀಯರನ್ನು ಅಕ್ರಮ ನಿರಾತ್ರಿಶರ ಹೆಸರಿನಲ್ಲಿ ಕೈ ಕೋಳ ಹಾಕಿ ಕರೆ ತರುವುದನ್ನು ಖಂಡಿಸಿದರು.

nudikarnata.com

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಮಾತನಾಡಿ, ಅಮೇರಿಕಾದಲ್ಲಿ ಅಕ್ರಮವಾಗಿ ನೆಲೆಸಿರುವ ಆರೋಪದಡಿ ಅಮೆರಿಕದಿಂದ ಗಡೀಪಾರಾಗಿರುವ ಭಾರತೀಯರ ಕೈಗೆ ಕೋಳ ತೊಡಿಸಿ ಕಳಹಿಸುವ ಮೂಲಕ ಅಮಾನವೀಯವಾಗಿ ನಡೆಸಿಕೊಳ್ಳುತ್ತಿದ್ದರು ಕೇಂದ್ರದ ಮೋದಿ ಸರ್ಕಾರ ಕೈ ಕಟ್ಟಿ ನೋಡಿ ಕುಳಿತ್ತಿದೆ ಎಂದರು.
ಭಾರತದ ರಾಜತಾಂತ್ರಿಕ ಅಧಿಕಾರಿ ದೇವಯಾನಿ ಖೋಬ್ರಗಡೆ ಅವರನ್ನು ನಡೆಸಿಕೊಂಡ ರೀತಿಗೆ ಅಂದಿನ ಯುಪಿಎ ಸರ್ಕಾರ ಖಡಕ್ ಸಂದೇಶವನ್ನು ಅಮೆರಿಕಕ್ಕೆ ರವಾನಿಸಿತ್ತು ಎಂದು ಹೇಳಿದರು

ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶದ ಸ್ಥಾನಮಾನಕ್ಕಿಂತ ತನ್ನ ವೈಯಕ್ತಿಕ ಪ್ರತಿಷ್ಠೆ ಹೆಚ್ಚು ಮುಖ್ಯವಾಗಿದೆ.ರಾಷ್ಟೀಯತೆ ಹೆಸರಿನಲ್ಲಿ ಜನತಾಸೇವೆ ಮಾಡುವಲ್ಲಿ ವಿಫಲವಾಗಿರುವ ಮೋದಿಯವರು ಈಗಲಾದರೂ ಅನಾಗರಿಕ ನೆಡವಳಿಕೆ ನಿಲ್ಲಿಸಲು ಮೋದಿಯವರು ಟ್ರಂಪ್ ಜೊತೆ ಮಾತಾಡಿ ಭಾರತ ದೇಶದ ವಿಮಾನ ಕಳುಹಿಸಿ ನಾಗರೀಕರನ್ನು ಗೌರವಯುತವಾಗಿ ಕರೆತರಲಿ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶೈಲೇಂದ್ರ, ಸಿಎಂ ದ್ಯಾವಪ್ಪ, ಸಾತನೂರು ಕೃಷ್ಣ, ಚಂದಗಾಲು ವಿಜಯಕುಮಾರ್, ಅಜ್ಜಹಳ್ಳಿ ರಾಮಕೃಷ್ಣ, ಜಯರಾಮ್, ಚಿನಕುರಳಿ ರಮೇಶ್, ಅಂಜನಾ,ದ್ಯಾವಣ್ಣ, ಉದಯ್ ಕುಮಾರ್, ಕೆಎಂ ರಾಮಕೃಷ್ಣ,ನಾಗರಾಜು, ನವೀನ್, ಶಕುಂತಲಾ, ಸೇರಿದಂತೆ ಇತರರು ಹಾಜರಿದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ