Sunday, May 19, 2024

ಪ್ರಾಯೋಗಿಕ ಆವೃತ್ತಿ

ಉತ್ತರ ಪ್ರದೇಶ| ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ: ವಾಹನಗಳು ಜಖಂ

ಉತ್ತರ ಪ್ರದೇಶದ ಅಮೇಥಿಯಲ್ಲಿರುವ ಕಾಂಗ್ರೆಸ್ ಕಚೇರಿ ಮೇಲೆ ಭಾನುವಾರ ಮಧ್ಯರಾತ್ರಿ ಕೆಲವು ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ದುಷ್ಕರ್ಮಿಗಳು ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವಾರು ವಾಹನಗಳನ್ನು ಧ್ವಂಸಗೊಳಿಸಿದ್ದು ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಘಟನೆಯ ನಂತರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರದೀಪ್ ಸಿಂಗಲ್ ಪಕ್ಷದ ಕಚೇರಿಗೆ ದೌಡಾಯಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, “ಉತ್ತರಪ್ರದೇಶದ ಅಮೇಥಿಯಲ್ಲಿ ಸ್ಮೃತಿ ಇರಾನಿ ಮತ್ತು ಬಿಜೆಪಿ ಕಾರ್ಯಕರ್ತರು ತೀವ್ರ ಭಯಭೀತರಾಗಿದ್ದಾರೆ. ಸೋಲಿನಿಂದ ಹತಾಶರಾದ ಬಿಜೆಪಿ ಗೂಂಡಾಗಳು ಲಾಠಿ ಹಿಡಿದು ಅಮೇಥಿಯ ಕಾಂಗ್ರೆಸ್ ಕಚೇರಿಯ ಹೊರಗೆ ಬಂದು ನಿಲ್ಲಿಸಿದ್ದ ವಾಹನಗಳನ್ನು ಧ್ವಂಸಗೊಳಿಸಿದರು” ಎಂದು ಆರೋಪಿಸಿದೆ.

“ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಮೇಥಿ ಜನರ ಮೇಲೆ ಮಾರಣಾಂತಿಕ ಹಲ್ಲೆ ಕೂಡ ನಡೆದಿದೆ. ಈ ದಾಳಿಯಲ್ಲಿ ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಸ್ಥಳೀಯರ ವಾಹನಗಳಿಗೂ ಹಾನಿಯಾಗಿದೆ” ಎಂದು ದೂರಿದ್ದಾರೆ.

“>

 

“ಈ ಇಡೀ ಘಟನೆಯಲ್ಲಿ ಪೊಲೀಸ್ ಆಡಳಿತ ಮೂಕಪ್ರೇಕ್ಷಕನಂತೆ ನಿಂತಿತ್ತು. ಅಮೇಥಿಯಲ್ಲಿ ಬಿಜೆಪಿ ಹೀನಾಯವಾಗಿ ಸೋಲಲಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ” ಎಂದು ಕಾಂಗ್ರೆಸ್ ಟ್ವೀಟ್‌ ಮಾಡಿದೆ.

ಘಟನೆ ಬಳಿಕ ನಗರದ ಸರ್ಕಲ್ ಇನ್ಸ್‌ಪೆಕ್ಟರ್ (ಸಿಒ) ಮಯಾಂಕ್ ದ್ವಿವೇದಿ ಅವರೊಂದಿಗೆ ಭಾರೀ ಪೊಲೀಸ್ ಪಡೆ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾನಿರತ ಪಕ್ಷದ ಕಾರ್ಯಕರ್ತರನ್ನು ಸಮಾಧಾನಪಡಿಸಲು ಪ್ರಯತ್ನಿಸಿದೆ.

ಈ ಬಗ್ಗೆ ತನಿಖೆ ನಡೆಸಿ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಒ ದ್ವಿವೇದಿ ಭರವಸೆ ನೀಡಿದ್ದಾರೆ. ಸದ್ಯ ಘಟನೆ ನಡೆದ ಸ್ಥಳದಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!