Friday, September 20, 2024

ಪ್ರಾಯೋಗಿಕ ಆವೃತ್ತಿ

ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಪ್ರಜ್ಞೆ ಮೂಡಿಸಿ : ಡಾ.ಹೆಚ್.ಎಲ್.ನಾಗರಾಜು

ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಪ್ರಜ್ಞೆ ಮೂಡಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಸಲಹೆ ನೀಡಿದರು.

ಮಂಡ್ಯ ನಗರದ ಸದ್ವಿದ್ಯಾ ಶಾಲೆಯ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇವರ ಸಹಯೋಗದಲ್ಲಿ ನಡೆದ 2022-23ನೇ ಸಾಲಿನ ಹೋಬಳಿ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ, ನಾಡಿನ ಚರಿತ್ರೆಯನ್ನು, ಹೋರಾಟಗಾರರನ್ನು ಈ ದೇಶಕ್ಕಾಗಿ ಕೊಡುಗೆ ನೀಡಿದವರನ್ನು ನೆನಪು ಮಾಡಿಕೊಳ್ಳಬೇಕು ಎಂದರು.

ಸಾಂಸ್ಕೃತಿಕ, ಕ್ರೀಡಾ, ಸ್ಪರ್ಧಾತ್ಮಕ ಪ್ರಜ್ಞೆಗಳು ಮಕ್ಕಳಲ್ಲಿ ಮೂಡಿ ಬರಲು ಪ್ರತಿಭಾ ಕಾರಂಜಿಯಂತಹ ವೇದಿಕೆಗಳು ಬಹಳ ಅತ್ಯಗತ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿಇಒ ಚಂದ್ರಕಾಂತ, ಶಿಕ್ಷಣ ಸಂಯೋಜಕ ಚೈತನ್ಯಮೂರ್ತಿ, ಶಂಕರಗೌಡ ಶಿಕ್ಷಣ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಎಸ್. ಬಿ.ಶಂಕರೇಗೌಡ, ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರತ್ನಶ್ರೀ, ಧರ್ಮದರ್ಶಿ ಆರ್.ಬಿ.ಫಣಿಮಾಲ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!