Thursday, September 19, 2024

ಪ್ರಾಯೋಗಿಕ ಆವೃತ್ತಿ

ಅಮೃತ ಜೀವನ ಯೋಜನೆ : ಸಹಾಯಧನಕ್ಕೆ ಅರ್ಜಿ ಅಹ್ವಾನ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ “ಮುಖ್ಯ ಮಂತ್ರಿಗಳ ಅಮೃತ ಜೀವನ ಯೋಜನೆ” ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲು ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ ವರ್ಗದ ರೈತಾಪಿ ವರ್ಗದವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೈನು ಘಟಕ ಒಂದು ಮಿಶ್ರತಳಿ ಹಸು, ಸುಧಾರಿತ ತಳಿ ಎಮ್ಮೆ ಘಟಕ ಮತ್ತು 10+1 ಕುರಿ-ಮೇಕೆ ಘಟಕ,(ಕುರಿ- ಮೇಕೆ ಘಟಕದ ಮೊತ್ತ ₹ 60,000)ಕ್ಕೆ ಸಹಾಯಧನ  ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಶೇ.90% ರಷ್ಟು ಇರುತ್ತದೆ. ಘಟಕದ ಸಹಾಯಧನದ ಹೊರತು ಪಡಿಸಿದಂತೆ ಉಳಿದ ಮೊತ್ತವನ್ನು ಫಲಾನುಭವಿಯ ವಂತಿಕೆ ಶೇಕಡ 10% ರಷ್ಟು ಅಥವಾ ಸಾಲದ ರೂಪದಲ್ಲಿ ಬ್ಯಾಂಕ್‍ನಿಂದ ಪಡೆಯಬೇಕು.

ಆಸಕ್ತ ರೈತಾಪಿಗಳು ಡಿ.23 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಜಿಲ್ಲೆಯ ಆಯಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ)ಅವರ ಕಚೇರಿಯಲ್ಲಿ ಪಡೆಯಬಹುದಾಗಿದೆ.

ಹೆಚ್ಚಿನ ವಿವರಗಳಿಗಾಗಿ ದೂ.ಸಂ.08232-220461 ಅಥವಾ ಮಂಡ್ಯ, ಮದ್ದೂರು, ಮಳವಳ್ಳಿ, ಕೆ.ಆರ್.ಪೇಟೆ, ನಾಗಮಂಗಲ, ಪಾಂಡವಪುರ, ಶ್ರೀರಂಗಪಟ್ಟಣದ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಗಳನ್ನು ಸಂಪರ್ಕಿಸಬಹುದೆಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!