Saturday, November 21, 2026

ಪ್ರಾಯೋಗಿಕ ಆವೃತ್ತಿ

ರಾಜ್ಯದಲ್ಲಿ ಅಮುಲ್ ಹಾಲು ಮಾರಾಟ ಖಂಡನೀಯ : ರಘುನಂದನ್

ಸಹಕಾರಿ ತತ್ವದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಮುಲ್ ಕರ್ನಾಟಕ ರಾಜ್ಯದಲ್ಲಿ ಹಾಲು ಮಾರಾಟಕ್ಕೆ ಮುಂದಾಗಿರುವುದು ಖಂಡನೀಯ ಎಂದು ಮನ್’ಮುಲ್ ಉಪಾಧ್ಯಕ್ಷ ರಘುನಂದನ್ ಎಂ.ಎಸ್ ಹೇಳಿದರು.

ಗುರುವಾರ ಸಂಜೆ ನಗರದಲ್ಲಿ ಮಾತನಾಡಿದ ಅವರು, ಅಮುಲ್ ಉತ್ಪನ್ನಗಳು ಈಗಾಗಲೇ ಮಾರುಕಟ್ಟೆಯಲ್ಲಿದೆ. ಆದರೆ ಸಹಕಾರಿ ಸಂಸ್ಥೆ ಮತ್ತೊಂದು ಸಹಕಾರಿ ಸಂಸ್ಥೆಯ ಮಾರುಕಟ್ಟೆ ವ್ಯಾಪ್ತಿಯಲ್ಲಿ ಹಾಲು ಮಾರಾಟಕ್ಕೆ ಮುಂದಾಗಿರುವುದು ಸ್ಥಳೀಯ ರೈತರಿಗೆ ಕಂಟಕವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸಹಕಾರಿ ಸಂಸ್ಥೆಗಳಿಲ್ಲದ ಪ್ರದೇಶಗಳಲ್ಲಿ ಮಾರುಕಟ್ಟೆ ಮಾಡಲು ನಮ್ಮ ತಕರಾರು ಇಲ್ಲ. ಮನ್’ಮುಲ್ ತಮಿಳುನಾಡು ಸೇರಿದಂತೆ ಹಲವೆಡೆ ಸಹಕಾರಿ ಸಂಸ್ಥೆಗಳು ಇಲ್ಲದ ಕಡೆ ಹಾಲು ಮಾರಾಟ ಮಾಡುತ್ತಿದೆ ಎಂದು ಸ್ಪಷ್ಟಪಡಿಸಿದರು.

ನಮ್ಮ ಗ್ರಾಹಕರು ಸಹ ನಂದಿನಿ ಬ್ರಾಂಡ್ ಹಾಲನ್ನು ಕೊಳ್ಳುವ ಮೂಲಕ ರೈತರ ಉಳಿವಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ