ಬೈಕ್’ಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಸವಾರರು ತೀವ್ರ ಗಾಯಗೊಂಡಿರುವ ಘಟನೆ ಬೆಂ-ಮೈ ರಾಷ್ಟ್ರೀಯ ಹೆದ್ದಾರಿಯ ಹಳೇ ಬೂದನೂರು ಬಳಿ ಜರುಗಿದೆ.
ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ಹಳೇ ಬೂದನೂರು ವಿ.ಸಿ.ನಾಲೆ ಬಳಿ ಹೆದ್ದಾರಿಯಲ್ಲಿ ಸಾಗುತ್ತಿದ್ದ ಬೈಕ್’ಗೆ ಕಾರು ಹಿಂದಿನಿಂದ ಡಿಕ್ಕಿಯಾಗಿದೆ. ಪರಿಣಾಮ ಬೈಕ್’ನಲ್ಲಿ ಸಾಗುತ್ತಿದ್ದ ಹಿರಿಯ ನಾಗರಿಕರೊಬ್ಬರು ಹಾಗೂ ಹಿಂಬದಿಯಲ್ಲಿದ್ದ ಮಹಿಳೆಗೆ ತೀವ್ರ ಗಾಯಗಳಾಗಿದೆ. ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಮಂಡ್ಯ ಮಿಮ್ಸ್ ಅಸ್ಪತ್ರೆಗೆ ಚಿಕಿತ್ಸೆಗಾಗಿ ಸಾಗಿಸಿದರು.
ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಆಗಮಿಸಿ ದೂರು ದಾಖಲಿಸಿಕೊಂಡು ತನಿಖೆ ಅರಂಭಿಸಿದ್ದಾರೆ.
ನಿತ್ಯ ಹೆದ್ದಾರಿಯಲ್ಲಿ ಹತ್ತಾರು ಅಪಘಾತ ಸಂಭವಿಸುತ್ತಿದ್ದರೂ ಹೈವೇ ಪ್ರಾಧಿಕಾರ ಹಾಗೂ ಜಿಲ್ಲಾಡಳಿತ ಕ್ರಮ ವಹಿಸದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.