Thursday, November 19, 2026

ಪ್ರಾಯೋಗಿಕ ಆವೃತ್ತಿ

ಗೆಜ್ಜಲಗೆರೆ ಬಳಿ ಅಪಘಾತ | ಬೆಂಗಳೂರು – ಮೈಸೂರು ಹೆದ್ದಾರಿಗೆ ಮತ್ತೇ ಮೂವರು ಬಲಿ

ಬೆಂಗಳೂರು – ಮೈಸೂರು ಹೆದ್ದಾರಿ ಅಕ್ಷರಶಃ ಸಾವಿನ ಕೂಪವಾಗಿ ಮಾರ್ಪಟ್ಟಿದೆ, ಹೆದ್ದಾರಿ ಉದ್ಘಾಟನೆಯಾದಾಗಿನಿಂದ ಸುಮಾರು 500 ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿ, ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಇಂದು ಮಂಡ್ಯ ಜಿಲ್ಲೆಯ ಗೆಜ್ಜನಗೆರೆ ಬಳಿ ನಡೆದ ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಐಟಿ ಉದ್ಯೋಗಿ ಸಾಗರ್ ಅವರ ತಂದೆ ನೀರಜ್ ಕುಮರ್, ತಾಯಿ ಸೆಲ್ವಿ ಸೇರಿದಂತೆ. ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ್ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ