Tuesday, November 24, 2026

ಪ್ರಾಯೋಗಿಕ ಆವೃತ್ತಿ

ಸಾಹಿತ್ಯ ಸಮ್ಮೇಳನ| ಆಹಾರ ಸಮಾನತೆ ಹೋರಾಟಕ್ಕೆ ಆರಂಭದ ಗೆಲುವು

ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ “ಆಹಾರ ಅಸಮಾನತೆ ಮತ್ತು ಆಹಾರ ಅಸ್ಪೃಶ್ಯತೆ”ಯನ್ನು ಕೊನೆಗಾಣಿಸಬೇಕೆಂದು ಮಂಡ್ಯ ಜಿಲ್ಲಾ ಪ್ರಗತಿಪರ ಸಂಘಟನೆಗಳು ನಡೆಸುತ್ತಿದ್ದ ಹೋರಾಟಕ್ಕೆ ಆರಂಭದ ಗೆಲುವು ದೊರೆತಿದೆ.

ಈ ಸಮ್ಮೇಳನದಿಂದಲೇ “ಆಹಾರ ಅಸಮಾನತೆ ಮತ್ತು ಆಹಾರ ಅಸ್ಪೃಶ್ಯತೆ” ಯನ್ನು ಕೊನೆಗಾಣಿಸುವ ಹೆಜ್ಜೆ ಇಡುವುದಾಗಿ ಸ್ವಾಗತ ಸಮಿತಿ ಅಧ್ಯಕ್ಷರು ಮತ್ತು ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಆಹಾರ ಸಮಿತಿ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ, ಶಾಸಕರಾದ ನರೇಂದ್ರಸ್ವಾಮಿ, ರವಿಕುಮಾರ್ ಗಣಿಗ ಮತ್ತು ಜಿಲ್ಲಾಧಿಕಾರಿ ಡಾ. ಕುಮಾರ್, ಜಿಲ್ಲಾ ಪಂಚಾಯತ್ ಸಿಇಓ ಶೇಖ್ ತನ್ವೀರ್ ಆಸಿಫ್ ಉಪಸ್ಥಿತಿಯಲ್ಲಿ ಹೋರಾಟಗಾರರಿಗೆ ಭರವಸೆ ನೀಡಿದ್ದಾರೆ.

ತಾಂತ್ರಿಕವಾಗಿ ಆ ಭರವಸೆಯ ಜಾರಿಯನ್ನು ಖಾತ್ರಿಗೊಳಿಸುವ ಕೆಲಸವನ್ನು ಮಂಡ್ಯ ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟ ಮಾಡುತ್ತದೆ ಮತ್ತು ಬೇಡಿಕೆಯನ್ನು ಜಾರಿಗೆ ತರಲು ಬದ್ದವಾಗಿರುತ್ತದೆ. ಆದ್ದರಿಂದ ಈ ಬದಲಾವಣೆಗೆ ಸಹಕರಿಸಿದ ಎಲ್ಲರಿಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಧನ್ಯವಾದಗಳನ್ನು  ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ