Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ‘ಕೈ’ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಬೆಂಬಲ

2024ರ ಲೋಕಸಭಾ ಚುನಾವಣೆಯಲ್ಲಿ ಶೋಷಿತ ಸಮುದಾಯಗಳು ಸಂವಿಧಾನ ಉಳಿಸುವ ಕೆಲಸ ಮಾಡಬೇಕು ಅದಕ್ಕಾಗಿ ಅತಿ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಸಂವಿಧಾನ ಉಳಿಸುವ ಕೆಲಸ ಮಾಡಬೇಕು, ಆ ನಿಟ್ಟಿನಲ್ಲಿ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಬೆಂಬಲಿಸುತ್ತೇವೆ ಎಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ.ರಾಮಚಂದ್ರಪ್ಪ ತಿಳಿಸಿದರು.

ಮಂಡ್ಯ ನಗರದ ಎಂ.ಸಿ. ರಸ್ತೆಯಲ್ಲಿರುವ ಕನಕ ಭವನದಲ್ಲಿ ಕರ್ನಾಟಕ ಶೋಷಿತ ಸಮುದಾಯ
ಗಳ ಮಹಾ ಒಕ್ಕೂಟ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ (ರಿ.) ಇವರ ಸಂಯುಕ್ತ ಆಶ್ರಯದಲ್ಲಿ.ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಮತ್ತು ಸ್ವಾಭಿಮಾನದ ಸಂರಕ್ಷಣೆಗಾಗಿ
ಶೋಷಿತ ಸಮುದಾಯಗಳ ರಾಜಕೀಯ ನಿರ್ಣಯ ಸಮಾವೇಶದ ಅಂಗವಾಗಿ ನೆಡೆದ ಮಂಡ್ಯ ಜಿಲ್ಲಾ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ಟಾರ್ ಚಂದ್ರು ಒಕ್ಕಲಿಗರು ಅಲ್ಲವೇ ?

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಚ್.ಡಿ. ಕುಮಾರಸ್ವಾಮಿ ಮಾತ್ರ ಒಕ್ಕಲಿಗರ. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಒಕ್ಕಲಿಗರು ಅಲ್ಲವೇ ಎಂದು ಪ್ರಶ್ನಿಸಿದರು. ಸ್ವಾಭಿಮಾನ ಎನ್ನುವುದು ಇದ್ದರೆ ಮಂಡ್ಯ ಜಿಲ್ಲೆಯ ಜನಗಳು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಗೆಲ್ಲಿಸಿ ಎಂದು ತಿಳಿಸಿದರು.

ಜೆಡಿಎಸ್ ಎನ್ನುವುದು ಒಂದು ಪಕ್ಷವಲ್ಲ ಒಂದು ಕುಟುಂಬದ ಪಕ್ಷವಾಗಿದ್ದು ಈಗಾಗಲೇ ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ಜೆಡಿಎಸ್ ಪಕ್ಷ ಎಸ್ ತೆಗೆದು ದೇವೇಗೌಡರ ಪಕ್ಷ ಎಂದು ಇಡಬೇಕು ಎಂದು ತಿಳಿಸಿದರು.

ಆರ್ ಎಸ್ಎಸ್. ಹಾಗೂ ಸಂಘ ಪರಿವಾರ ದುಷ್ಟಕೂಟ

ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ 2024ರ ಲೋಕಸಭಾ ಚುನಾವಣೆ ಮಹತ್ತರವಾದ ದೇಶದ ಭವಿಷ್ಯ ನಿರ್ಧಾರ ಮಾಡುವ ಚುನಾವಣೆಯಾಗಿದ್ದು ಆರ್ ಎಸ್ಎಸ್. ಹಾಗೂ ಸಂಘ ಪರಿವಾರ ದುಷ್ಟಕೂಟ ಭಾರತದಲ್ಲಿ ತನ್ನ ಕಾರ್ಯತಂತ್ರ ರೂಪಿಸುತ್ತಿದ್ದು, ಲೋಕಸಭಾ ಚುನಾವಣೆಯಲ್ಲಿ 400 ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಹೇಳುತ್ತಿದ್ದು ಯಾವ ಆಧಾರದ ಮೇಲೆ ಗೆಲ್ಲುತ್ತಾರೆ ಎನ್ನುವುದನ್ನು ಶೋಷಿತ ಸಮುದಾಯಗಳು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಕುಟುಂಬದ ಸ್ವಾರ್ಥಕ್ಕಾಗಿ ಕರ್ನಾಟಕವನ್ನು ಬಲಿ ಕೊಡಲು ಎಚ್.ಡಿ.ಕುಮಾರಸ್ವಾಮಿ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಂತಿದ್ದಾರೆ. ಸಂವಿಧಾನ ಉಳಿಯಬೇಕಾದರೆ ಮಂಡ್ಯ ಲೋಕಸಭಾ ಚುನಾವಣೆಯ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಹೀನಾಯವಾಗಿ ಸೋಲಬೇಕು ಎಂದು ತಿಳಿಸಿದರು.

ಮಂಡ್ಯ ಜಿಲ್ಲೆಯ ಜನ ಜಾತಿ ನೋಡಿ ವೋಟು ಹಾಕುವುದಿಲ್ಲ. ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆ ನಮ್ಮ ಮೂಲಭೂತ ಹಕ್ಕು ಆಗಬೇಕು ಆದ್ದರಿಂದ ಇತರೆ ಪಕ್ಷದಲ್ಲಿರುವ ಅಹಿಂದ ವರ್ಗದ ಮುಖಂಡರುಗಳು ಮಾನ ಮರ್ಯಾದೆಯಿಂದ ಹೊರಗಡೆ ಬಂದು ದೇಶ ಉಳಿಸುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಚಾಲಕ ಎನ್. ಅನಂತನಾಯ್ಕ, ಸಂಚಾಲನ ಸಮಿತಿ ಸದಸ್ಯ ಗುರುಪ್ರಸಾದ್ ಕೆರಗೋಡು, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಸುರೇಶ್,ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಒಕ್ಕೂಟದ ಸಂಚಾಲಕರಾದ ಕೆ.ಎಚ್. ನಾಗರಾಜು, ಎಲ್.ಸಂದೇಶ್, ಮಂಡ್ಯ ಜಿಲ್ಲೆಯ ಮುಖಂಡರಾದ ನಾಗೇಂದ್ರ ಕುಮಾರ್ ಅಮ್ಜದ್ ಪಾಶ, ಮುಜಾಯಿದ್, ಸತೀಶ್, ಪುಟ್ಟಸ್ವಾಮಿ, ಜೆಬಿ,ಬಸವರಾಜು, ನಾಗರತ್ನ, ಚಂದ್ರಶೇಖರ್,ಕೃಷ್ಣ, ಸೇರಿದಂತೆ ಇತರರು ಭಾಗವಹಿಸಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!