ಸಂವಿಧಾನವನ್ನು ಬದಲಿಸುತ್ತೇವೆ, ಸಂವಿಧಾನವನ್ನು ತಿದ್ದುಪಡಿ ಮಾಡುತ್ತೇವೆ ಎನ್ನುತ್ತಿರುವ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಎಂಬ ಕೀಚಕನನ್ನು ಬಿಜೆಪಿಯು ಪಕ್ಷದಿಂದ ಕಿತ್ತುಹಾಕಿ, ಆತನ ಪರವಾಗಿ ಕ್ಷಮೆ ಯಾಚಿಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.
ಬಿಜೆಪಿ ಸಂವಿಧಾನದ ಯಾವ ಭಾಗ, ಯಾವ ಅಂಶ, ಯಾವ ಅನುಚ್ಚೇದ, ಯಾವ ಕಲಂ ಬಗ್ಗೆ ಅಸಹನೆ ಹೊಂದಿದೆ ಎಂದು ಹೇಳಬೇಕು? ಸಂವಿಧಾನದಲ್ಲಿರುವ ಸ್ವತಂತ್ರದ ಹಕ್ಕಿನ ಬಗ್ಗೆ ಆಕ್ಷೇಪಣೆಯೇ? ಸಮತೆ, ಸಮಾನತೆ ಬೇಡವಾಗಿದೆಯೇ? ಶೋಷಣೆಯ ವಿರುದ್ಧದ ಹಕ್ಕು ಇರಬಾರದೇ? ಎಂಬುದನ್ನು ತಿಳಿಸಬೇಕು. ಧಾರ್ಮಿಕ ಸ್ವತಂತ್ರದ ಹಕ್ಕು ಇರಬಾರದೇ? ವಾಕ್ ಹಾಗೂ ಅಭಿವ್ಯಕ್ತಿ ಸ್ವತಂತ್ರ ಬೇಡವೇ? ಶಿಕ್ಷಣದ ಹಕ್ಕು ಅಪರಾಧವೇ? ಯಾವ ಕಾರಣಕ್ಕಾಗಿ ಸಂವಿಧಾನವನ್ನು ತಿದ್ದಬೇಕು ಎಂಬುದನ್ನು ಬಿಜೆಪಿ ಹೇಳಬೇಕು, ಇಲ್ಲವೇ ಅನಂತಕುಮಾರ ಹೆಗಡೆ ಎಂಬ ಕೀಚಕನನ್ನು ಬಿಜೆಪಿಯು ಪಕ್ಷದಿಂದ ಕಿತ್ತುಹಾಕಿ, ಆತನ ಪರವಾಗಿ ಕ್ಷಮೆ ಯಾಚಿಸಬೇಕೆಂದು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಆಗ್ರಹಿಸಿದೆ.
ಸಂವಿಧಾನ ಬದಲಿಸಲು 400 ಸ್ಥಾನಗಳು ಬೇಕು ಎಂಬ ಬಿಜೆಪಿ ಸಂಸದರ ಹೇಳಿಕೆ ನರೇಂದ್ರ ಮೋದಿ ಮತ್ತು ಅವರ ‘ಸಂಘ ಪರಿವಾರ’ದ ಗುಪ್ತ ಉದ್ದೇಶಗಳ ಬಹಿರಂಗ ಘೋಷಣೆಯಾಗಿದೆ. ಬಾಬಾ ಸಾಹೇಬರ ಸಂವಿಧಾನವನ್ನು ನಾಶ ಮಾಡುವುದೇ ನರೇಂದ್ರ ಮೋದಿ ಮತ್ತು ಬಿಜೆಪಿಯ ಅಂತಿಮ ಗುರಿಯಾಗಿದೆ. ಅವರು ನ್ಯಾಯ, ಸಮಾನತೆ, ನಾಗರಿಕ ಹಕ್ಕುಗಳು ಮತ್ತು ಪ್ರಜಾಪ್ರಭುತ್ವವನ್ನು ದ್ವೇಷಿಸುತ್ತಾರೆ ಎಂದು ಕಾಂಗ್ರೆಸ್ ಪಕ್ಷವು ಬಿಜೆಪಿ ವಿರುದ್ದ ಕಿಡಿಕಾರಿದೆ.
ಸಂವಿಧಾನವನ್ನು ಬದಲಿಸುತ್ತೇವೆ, ಸಂವಿಧಾನವನ್ನು ತಿದ್ದುಪಡಿ ಮಾಡುತ್ತೇವೆ ಎನ್ನುತ್ತಿರುವ @BJP4Karnataka ಗೆ ಸಂವಿಧಾನದ ಯಾವ ಭಾಗ, ಯಾವ ಅಂಶ, ಯಾವ ಅನುಚ್ಚೇದ, ಯಾವ ಕಲಂ ಬಗ್ಗೆ ಅಸಹನೆ ಹೊಂದಿದೆ ಎಂದು ಹೇಳಬೇಕು?
ಸಂವಿಧಾನದಲ್ಲಿರುವ
◆ಸ್ವತಂತ್ರದ ಹಕ್ಕಿನ ಬಗ್ಗೆ ಆಕ್ಷೇಪಣೆಯೇ?
◆ಸಮತೆ, ಸಮಾನತೆ ಬೇಡವಾಗಿದೆಯೇ?
◆ಶೋಷಣೆಯ ವಿರುದ್ಧದ ಹಕ್ಕು…— Karnataka Congress (@INCKarnataka) March 10, 2024
“>




