Friday, September 20, 2024

ಪ್ರಾಯೋಗಿಕ ಆವೃತ್ತಿ

ಸಂಸ್ಕೃತಿಯಿಂದ ವ್ಯಕ್ತಿಯ ವ್ಯಕ್ತಿತ್ವ ವಿಕಸನ: ಚಲುವಯ್ಯ

ಸಂಸ್ಕೃತಿಯಿಂದ ವ್ಯಕ್ತಿಯ ವ್ಯಕ್ತಿತ್ವ ವಿಕಸನಗೊಳ್ಳಲು ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳು ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಲುವಯ್ಯ ತಿಳಿಸಿದರು.

ಮಂಡ್ಯ ತಾಲೂಕಿನ ಯಲಿಯೂರು ಸರ್ಕಲ್ ಬಳಿ ಇರುವ ಅನಿಕೇತನ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಚೈತನ್ಯೋತ್ಸವ ಸಮಾರೋಪ ಭಾಷಣ ಮಾಡಿದ ಅವರು, ವಿದ್ಯಾರ್ಥಿಗಳು ಕೇವಲ ಪಠ್ಯಗಳಲ್ಲೇ ಮುಳುಗುವುದು ಸರಿಯಲ್ಲ, ಪಠ್ಯೇತರ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ವಿದ್ಯೆಯ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ‍್ಯಕ್ರಮಗಳೂ ಅಗತ್ಯ. ಮಕ್ಕಳನ್ನು ಬೆಳೆಸುವ ವ್ಯಕ್ತಿತ್ವ ರೂಪಿಸುವುದು ಶಿಕ್ಷಣ ಸಂಸ್ಥೆಗಳ ಕರ್ತವ್ಯವು ಆಗಿದೆ. ಹಿಂದೆಲ್ಲ ಮಂಡ್ಯ ಜಿಲ್ಲೆಯಲ್ಲಿ ಪ್ರತಿಭಾ ಫಲಾಯನ ಯತೇಚ್ಚವಾಗಿ ನಡೆಯುತ್ತಿತ್ತು. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಮಕ್ಕಳನ್ನು ಉಡುಪಿ, ಮಂಗಳೂರು, ಮೂಡುಬಿದಿರೆ ಸೇರಿದಂತೆ ಹೊರ ಜಿಲ್ಲೆಗಳಲ್ಲಿ ಶಿಕ್ಷಣ ಕೊಡಿಸಲು ಮುಂದಾಗುತ್ತಿದ್ದರು. ಆದರೆ ಈಗ ಜಿಲ್ಲೆಯಲ್ಲೇ ಉತ್ತಮ ಗುಣಮಟ್ಟದ ಶಿಕ್ಷಣ ಸಂಸ್ಥೆಗಳು ತಲೆ ಎತ್ತಿವೆ. ಹಾಗಾಗಿ ಜಿಲ್ಲೆಯ ಮಕ್ಕಳಿಗೆ ಇದೊಂದು ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಮಾತನಾಡಿ, ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಬೇಕು. ಗಂಡಾಗಲಿ, ಹೆಣ್ಣಾಗಲಿ ಎಲ್ಲರಿಗೂ ಒಂದೇ ರೀತಿಯ ಶಿಕ್ಷಣ ನೀಡಬೇಕು. ಹೆಣ್ಣಿಗೆ ಉತ್ತಮ ಶಿಕ್ಷಣ ನೀಡಿ ಅವರ ಬೆಳವಣಿಗೆಗೆ ಸಹಕಾರ ನೀಡಬೇಕು ಎಂದು ಪೋಷಕರಿಗೆ ಸಲಹೆ ನೀಡಿದರು.

ಚೇತನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಕೆ.ಸಿ ಜಯರಾಮ್. ಸಂಸ್ಥಾಪಕ ಅಧ್ಯಕ್ಷ ಡಾ. ಕೆ.ಎಂ. ಜಗದೀಶ್, ಕಾರ್ಯದರ್ಶಿ ಹೆಚ್.ಚುಂಚೆಗೌಡ, ಕಾಲೇಜಿನ ಪ್ರಾಂಶುಪಾಲ ಡಾ.ರಾಮಲಿಂಗಯ್ಯ, ಕಾಲೇಜಿನ ಉಪಾಧ್ಯಕ್ಷ ಕೆ.ಎಸ್. ಬಸವರಾಜು, ಟ್ರಸ್ಟಿಗಳಾದ ವೈ.ಕೆ. ಕುಮಾರ್, ಡಿ.ಎಸ್. ದೇವರಾಜು, ಉಪಪ್ರಾಂಶುಪಾಲ ಎಂ.ಕೆ. ಮಂಗಳಮ್ಮ, ಮುಖ್ಯ ಶಿಕ್ಷಕಿ ಎನ್. ತೇಜೇಶ್ವರಿ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!