Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಅಣ್ಣನ ನೆನಪು ಸಾಕ್ಷ್ಯ ನಾಟಕ ಪ್ರದರ್ಶನ ; ಲಂಕೇಶ್ ಮಂಗಲ

ನೆಲದನಿ ಬಳಗದ ವತಿಯಿಂದ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ಅಣ್ಣನ ನೆನಪು ಸಾಕ್ಷ್ಯ ನಾಟಕ ಪ್ರದರ್ಶನವನ್ನು ಮೇ 24ರ ಸಂಜೆ 6 ಗಂಟೆಗೆ ಮಂಡ್ಯ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಬಳಗದ ಅಧ್ಯಕ್ಷ ಎಂ.ಸಿ.ಲಂಕೇಶ್ ಮಂಗಲ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೇದಿಕೆ ಕಾರ್ಯಕ್ರಮದ ನಂತರ ಸಂಜೆ 7ಕ್ಕೆ ನಾಟಕ ಪ್ರದರ್ಶನಗೊಳ್ಳಲಿದ್ದು, ನಾಟಕವು ಸುಮಾರು 1 ಗಂಟೆ 50 ನಿಮಿಷಗಳ ಕಾಲ ನಡೆಯಲಿದೆ ಎಂದರು.

ವೇದಿಕೆ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ವಿಶ್ವ ಒಕ್ಕಲಿಗ ಮಠದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ವಹಿಸಲಿದ್ದು, ನೆಲದನಿ ಬಳಗದ ಪೋಷಕರಾದ ರುಕ್ಮಿಣಿ ಎಸ್.ಸಿ. ಶಂಕರೇಗೌಡ ಅಧ್ಯಕ್ಷತೆ ವಹಿಸುವರು. ರೈತ ನಾಯಕಿ ಸುನಂದ ಜಯರಾಂ ಉದ್ಘಾಟನೆ ನೆರವೇರಿಸುವರು ಎಂದು ಹೇಳಿದರು.

ಲಯನ್ಸ್ ಸಂಸ್ಥೆಯ ಅಂತರಾಷ್ಟ್ರೀಯ ನಿರ್ದೇಶಕ ಡಾ.ನಾಗರಾಜು ವಿ.ಭೈರಿ, ಸೌತ್ ಮಲ್ಟಿಪಲ್ ಉಪಾಧ್ಯಕ್ಷ ಕೆ.ಟಿ.ಹನುಮಂತು, ನೆಲದನಿ ಬಳಗದ ಪೋಷಕ ಮರೀಗೌಡ, ಮಿಮ್ಸ್‌ ಪ್ರಸೂತಿ ಮತ್ತು ಸ್ತ್ರೀ ರೋಗ ವಿಭಾಗದ ಸಹ ಪ್ರಾಧ್ಯಾಪಕ ಡಾ.ಮನೋಹರ್, ಮೂಳೆ ಮತ್ತು ಕೀಲು ರೋಗ ತಜ್ಞ ಡಾ.ರವಿಕುಮಾರ್, ಎಚ್.ಎಸ್, ಕನ್ನಿಕಾ ಶಿಲ್ಪ ನವೋದಯ ಎಜುಕೇಷನ್ ಟ್ರಸ್ಟ್‌ ಕಾರ್ಯದರ್ಶಿ ಹೆಚ್.ಆರ್.ಕನ್ನಿಕ ಅವರನ್ನು ಅಭಿನಂದಿಸುವರು ಎಂದು ತಿಳಿಸಿದರು.

ಕನ್ನಡ ಸಂಸೃತಿಕ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್, ಎಸ್.ಬಿ.ಎಜುಕೇಷನ್ ಟ್ರಸ್ಟ್‌ ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ, ಡಿ.ಆರ್.ಎಂ ಆಸ್ಪತ್ರೆಯ ವ್ಯವಸ್ಥಾಪಕ ಡಾ.ಬಿ.ಹೆಚ್.ಮಂಜುನಾಥ್, ಎ.ಸಿ.ರಮೇಶ್, ಹೆಚ್.ಮಾದೇಗೌಡ, ಹೆಚ್.ಆರ್.ಅರವಿಂದ್, ತಗ್ಗಹಳ್ಳಿ ವೆಂಕಟೇಶ್, ಎನ್.ನಾಗೇಶ್, ವಿನಯ್, ಎಂ.ಆರ್.ಮಂಜು ಮುತ್ತೇಗೆರೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಬಳಗದ ನವೀನ್‌ಕುಮಾರಿ, ಕುಮಾರ್‌ಗೌಡ, ಶಿವಮಲ್ಲು, ನಾಗೇಶ್, ಮಹದೇವಸ್ವಾಮಿ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ