Friday, September 20, 2024

ಪ್ರಾಯೋಗಿಕ ಆವೃತ್ತಿ

ಅನ್ನಭಾಗ್ಯ| ರಾಜ್ಯಕ್ಕೆ ಮಾಸಿಕ 20 ಸಾವಿರ ಮೆಟ್ರಿಕ್ ಟನ್ ಅಕ್ಕಿ ಪೂರೈಸಲು ಕೇಂದ್ರಕ್ಕೆ ಮತ್ತೇ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ ಹೆಚ್ ಮುನಿಯಪ್ಪ ಅವರು ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪ್ರಲ್ಹಾದ್‌ ಜೋಶಿ ಅವರನ್ನು ಭೇಟಿ ಮಾಡಿ ಅಕ್ಕಿ ಖರೀದಿ ಕುರಿತು ಚರ್ಚಿಸಿದ್ದಾರೆ.

ಭೇಟಿ ಬಳಿಕ ಸುದ್ದಿಗಾರರ ಜೊತೆ ಮಾಹಿತಿ ಹಂಚಿಕೊಂಡ ಸಚಿವರು, “ತಿಂಗಳಿಗೆ ಎಷ್ಟು ಅಕ್ಕಿ ವಿತರಿಸುತ್ತೀರಾ, ವರ್ಷಕ್ಕೆ ಇಷ್ಟು ಅಕ್ಕಿ ಬೇಕಾಗುತ್ತದೆ ಎಂಬುದನ್ನು ಸಚಿವರ ಮುಂದೆ ಪ್ರಸ್ತಾಪಿಸಿದ್ದೇನೆ” ಎಂದರು.

“ಬಿಪಿಎಲ್ ಪಡಿತರ ಚೀಟಿಯಲ್ಲಿ ಎರಡು ಭಾಗ ಇದೆ. ಒಂದು ಕೇಂದ್ರ ಸರ್ಕಾರ ಕೊಡುತ್ತದೆ. ಅದು ನಾಲ್ಕು ಕೋಟಿ ಜನಕ್ಕೆ ಕೊಡುತ್ತದೆ. ನಮ್ಮ ರಾಜ್ಯ ಸರ್ಕಾರ 4 ಕೋಟಿ 50 ಲಕ್ಷ ಬಿಪಿಎಲ್ ಪಡಿತರದಾರರಿಗೆ ಅಕ್ಕಿ ಕೊಡುತ್ತಿದ್ದೇವೆ. ರಾಜ್ಯ ಸರ್ಕಾರ ಕರ್ನಾಟಕದಲ್ಲಿ 13 ಲಕ್ಷ ಬಿಪಿಎಲ್ ಪಡಿತರ ಕಾರ್ಡ್ಗಳನ್ನು ಹೊಂದಿದ್ದು ಅಂದರೆ 40 ರಿಂದ 50 ಲಕ್ಷ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಅಕ್ಕಿಯನ್ನು ಕೊಡುತ್ತಿದೆ. ನಾವು ಕೇಂದ್ರ ಸ್ವಾಮ್ಯದ ಕೇಂದ್ರೀಯ ಭಂಡಾರ ಎನ್.ಸಿ.ಸಿ.ಎಫ್ ಅವರ ಮುಖಾಂತರ ಅಕ್ಕಿಯನ್ನು ಖರೀದಿ ಮಾಡುತ್ತಿದ್ದೇವೆ. ಈಗ ಕೇಂದ್ರ ಸರ್ಕಾರ ಮುಂದೆ ಬಂದಿದ್ದು 28 ರೂಪಾಯಿಗೆ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದಾರೆ” ಎಂದು ಹೇಳಿದರು.

“ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ (FCI) 34 ರೂ.ಯಂತೆ ಇಂದಿನ ರೇಟ್ ಅಲ್ಲಿ ನೀಡಲಾಗುತ್ತಿದೆ. ಈಗ 28 ರೂಪಾಯಿಗೆ ಅಕ್ಕಿ ಕೊಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಕೇಂದ್ರ ಸರ್ಕಾರವನ್ನು ಮೊದಲು ಕೇಳಿದಾಗ ಕೊಡಲಿಲ್ಲ. ಈಗ ಮುಂದೆ ಬಂದಿರೋದನ್ನು ಸ್ವಾಗತ ಮಾಡುತ್ತೇವೆ” ಎಂದು ತಿಳಿಸಿದರು.

“ನಾವು ರಾಜ್ಯದಲ್ಲಿ ಸರ್ವೇ ಮಾಡಿರುವ ಪ್ರಕಾರ ಗ್ರಾಹಕರು ಐದು ಕೆಜಿ ಅಕ್ಕಿ ಜೊತೆಗೆ ಬೇಳೆ, ಎಣ್ಣೆ ,ಸಕ್ಕರೆ ಮುಂತಾದ ಆಹಾರ ಸಾಮಗ್ರಿಗಳನ್ನು (ಪದಾರ್ಥಗಳನ್ನು) ಕೊಟ್ಟರೆ ಅನುಕೂಲವಾಗುತ್ತದೆ ಎಂದು ರಾಜ್ಯದ 93 ಪರ್ಸೆಂಟ್ ಜನ ಅಭಿಪ್ರಾಯಪಟ್ಟಿದ್ದಾರೆ. ನಾನು ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಜೊತೆ ಚರ್ಚಿಸಿ ಯಾವ ರೀತಿ ಮಾಡಬೇಕು ಅನ್ನೋದನ್ನು ತೀರ್ಮಾನಿಸಲಾಗುವುದು” ಎಂದರು.

“ರಾಜ್ಯದಲ್ಲಿ 13 ಲಕ್ಷ ಬಿಪಿಲ್ ಕಾರ್ಡ್‌ಗಳಿದ್ದು 45 ರಿಂದ 55 ಲಕ್ಷ ಪಡಿತರದಾರರಿದ್ದಾರೆ. ಅದಕ್ಕೆ ಪ್ರತಿ ತಿಂಗಳಿಗೆ 20 ಸಾವಿರ ಮೆಟ್ರಿಕ್ ಟನ್ ಬೇಕಾಗುತ್ತದೆ ಎಂದು ಸಚಿವರಲ್ಲಿ ಪ್ರಸ್ತಾಪಿಸಿದ್ದೇನೆ” ಎಂದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!