Sunday, November 22, 2026

ಪ್ರಾಯೋಗಿಕ ಆವೃತ್ತಿ

ಅತ್ಯಾಚಾರ ಪ್ರಕರಣ | ಬಿಜೆಪಿ ಶಾಸಕ ಮುನಿರತ್ನ ವಿರುದ್ದ ಮತ್ತೊಂದು ಎಫ್ಐಆರ್

ಅತ್ಯಾಚಾರ ಆರೋಪದಡಿ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ.

ಮುನಿರತ್ನ, ವಸಂತ, ಚನ್ನಕೇಶ, ಕಮಲ್ ಎಂಬುವರ ವಿರುದ್ಧ ಆರ್ ಎಂ ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. 2023ರಲ್ಲಿ ಈ ಪ್ರಕರಣ ನಡೆದಿತ್ತು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯ ಬಳಿಕ ಆರೋಪಿಗಳು ಬೆದರಿಕೆ ಹಾಕಿದ್ದರಿಂದ ಹೆದರಿ ದೂರು ನೀಡಲು ಸಾಧ್ಯವಾಗಿರಲಿಲ್ಲ. ಈಗ ದೂರು ನೀಡುತ್ತಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಈ ಹಿಂದೆ ಬಿಜೆಪಿ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೆ. ಪತಿ ನನ್ನನ್ನು ಬಿಟ್ಟು ಹೋಗಿದ್ದರಿಂದ ಮತ್ತೊಬ್ಬರನ್ನು ವಿವಾಹವಾಗಿ ಜೀವನ ನಡೆಸುತ್ತಿದ್ದೇನೆ. ವೇಶ್ಯಾವಾಟಿಕೆ ನಡೆಸುತ್ತಿದ್ದೇನೆ ಎಂಬ ಆರೋಪ ಹೊರಿಸಿ ನನ್ನನ್ನು ಜೈಲಿಗೆ ಕಳುಹಿಸಿದ್ದರು. ಜಾಮೀನು ಪಡೆದು ಜೈಲಿನಿಂದ ಹೊರಬಂದ ಬಳಿಕ ಅವರ ಬೆಂಬಲಿಗರು ಬಂದು ಪ್ರಕರಣ ಇತ್ಯರ್ಥ ಪಡಿಸಿಕೊಳ್ಳುವಂತೆ ಬೆದರಿಕೆ ಹಾಕಿದ್ದರು. ಬಳಿಕ ಶಾಸಕರ ಕಚೇರಿಗೆ ಕರೆದೊಯ್ದು ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ವಿವರಿಸಿದ್ದಾರೆ. ಈ ದೂರು ಆಧರಿಸಿ ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ.

ಮುನಿರತ್ನ ಅವರು ನನ್ನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದರು. ಬಳಿಕ, ದ್ರಾವಣವನ್ನು ತೆಗೆದು ನನ್ನ ಎಡ ಕೈಗೆ ಚುಚ್ಚಿ, ಜೀವನ ಪರ್ಯಂತ ನರಳು ಎಂದು ಬೆದರಿಸಿದ್ದರು ಎಂದೂ ಎಫ್ ಐ ಆರ್ ನಲ್ಲಿ ನಮೂದಾಗಿದೆ. 2025ರ ಜನವರಿ 14ರಂದು ಹೊಟ್ಟೆನೋವಿಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ತೆರಳಿದಾಗ ಇಡಿಆರ್ ವೈರಸ್ ಕಾಯಿಲೆ ಇರುವುದು ಪತ್ತೆಯಾಗಿತ್ತು. ಇದು ವಾಸಿಯಾಗದ ಕಾಯಿಲೆ ಎಂದು ವರದಿಯಲ್ಲಿ ವೈದ್ಯರು ತಿಳಿಸಿದ್ದಾರೆ ಎಂದು ವಿವರಿಸಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ