Saturday, November 21, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು | ಒಳಮೀಸಲಾತಿ ಜಾರಿಗೆ ಒತ್ತಾಯ ; ಸಿಎಂ ಸಿದ್ದರಾಮಯ್ಯಗೆ ಮನವಿ

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಮುಕ್ತಾಯವಾಗಿದ್ದು, ಕೂಡಲೇ ನ್ಯಾ.ನಾಗಮೋಹನ್ ದಾಸ್ ಆಯೋಗದಿಂದ ವರದಿ ಪಡೆದು ಒಳ ಮೀಸಲಾತಿಯನ್ನು ಜಾರಿಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮಾದಿಗ ಒಳಮೀಸಲಾತಿ ಜಾರಿಗಾಗಿ ಹೋರಾಟ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.

ಮಂಡ್ಯ ಜಿಲ್ಲೆಯ ಮದ್ದೂರಿಗೆ ಮುಖ್ಯಮಂತ್ರಿಗಳು ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರನ್ನು ಭೇಟಿ ಮಾಡಿದ ಹೋರಾಟಗಾರರು, ಆಗಸ್ಟ್ 1, 2024ರಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದಂತೆ ಒಳಮೀಸಲಾತಿ ಜಾರಿಗೊಳಿಸಬೇಕು, ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ 6ನೇ ಗ್ಯಾರಂಟಿ ಒಳಮೀಸಲಾತಿ ಕಲ್ಪಿಸಿಕೊಡುವುದಾಗಿ ಘೋಷಿಸಿಕೊಂಡಂತೆ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಒಳಮೀಸಲಾತಿ ಜಾರಿಯಾಗುವವರೆಗೆ ಬ್ಯಾಕಲಾಗ್ ಹುದ್ದೆಗಳನ್ನು ಮತ್ತೆ ಇತರೆ ನೇಮಕಾತಿಗಳನ್ನು ರದ್ದು ಪಡಿಸಬೇಕು. ಹಾಗೂ ಜಾತಿ ಜನಗಣತಿ ವರದಿ ಮುನ್ನೆಲೆಗೆ ತಂದು ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಗೊಂದಲ ಸೃಷ್ಟಿಸುವ ಜನಗಣತಿ ವರದಿಯನ್ನು ಕೈಬಿಟ್ಟು ಮೊದಲು ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಸಿ.ಕೆ.ಪಾಪಯ್ಯ, ಎಂ.ಸ್ವಾಮಿ, ಕೃಷ್ಣ, ಅಂಬೂಜಿ ಹಾಗೂ ಲಿಂಗರಾಜು ಸೇರಿದಂತೆ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ