ಮಂಡ್ಯ ತಾಲ್ಲೂಕಿನ ಭೂತನಹೊಸೂರು ಗ್ರಾಮದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಮಂಡ್ಯ ಜಿಲ್ಲಾಧ್ಯಕ್ಷ ಹೆಚ್.ಡಿ.ಜಯರಾಂ ಮನವಿ ಮಾಡಿದ್ದಾರೆ.

ಭೂತನಹೊಸೂರು ಗ್ರಾಮದ ಕೊನ್ನಕಟ್ಟೆ ರಸ್ತೆಯ ಪಕ್ಕದಲ್ಲಿ ಕುಡಿಯುವ ನೀರಿನ ವ್ಯವಸ್ಥೆಗಾಗಿ ಬೋರ್‌ವೆಲ್ ಕೊರೆಸಿದ್ದು, ಅಲ್ಲಿಗೆ ಮೋಟಾರ್ ಅಳವಡಿಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಮಂಡ್ಯ ಜಿಲ್ಲಾ ಪಂಚಾಯತ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಗೆ ಇಂದು ಮನವಿ ಪತ್ರ ಸಲ್ಲಿಸಿದರು.
ಗ್ರಾಮದಲ್ಲಿ ಹೊಸದಾಗಿ ಬೋರ್‌ವೆಲ್ ಕೊರೆಯಲಾಗಿದ್ದರೂ, ಅದಕ್ಕೆ ಮೋಟಾರ್ ಮತ್ತು ಪೈಪ್‌ಲೈನ್ ಅಳವಡಿಸದೆ ನಿರ್ಲಕ್ಷ್ಯ ವಹಿಸಲಾಗಿದೆ. ಇದರಿಂದ ಲಕ್ಷಾಂತರ ರೂ. ವೆಚ್ಚದಲ್ಲಿ ಕೊರೆಸಿರುವ ಬೋರ್‌ವೆಲ್ ಸಾರ್ವಜನಿಕರ ಉಪಯೋಗಕ್ಕೆ ಬಾರದಂತಾಗಿದೆ, ಇದರಿಂದ ಈ ಭಾಗದಲ್ಲಿ ಕುಡಿಯುವ ನೀರಿಗೆ ಆಹಾಕಾರ ಉಂಟಾಗಿದೆ. ತುರ್ತಾಗಿ ಬೋರ್‌ವೆಲ್‌ಗೆ ಮೋಟಾರ್ ಅಳವಡಿಸಿ ಪೈಪ್‌ಲೈನ್ ಮೂಲಕ ಸಾರ್ವಜನಿಕರಿಗೆ ಕುಡಿಯುವ ನೀರೊದಗಿಸುವಂತೆ ಮನವಿ ಮಾಡಿದ್ದಾರೆ.




