Thursday, October 10, 2024

ಪ್ರಾಯೋಗಿಕ ಆವೃತ್ತಿ

ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

2022-23ನೇ ಶೈಕ್ಷಣಿಕ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧಿಕರಣದಲ್ಲಿ 2 ವರ್ಷಗಳ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು 40 ವರ್ಷದೊಳಗಿರಬೇಕು ಹಾಗೂ ವಾರ್ಷಿಕ ರೂ. 2.50 ಲಕ್ಷ ಆದಾಯದ ಮಿತಿಯಿರಬೇಕು.

ಅಭ್ಯರ್ಥಿಗಳು ಆನ್‌ಲೈನ್ https://sw.kar.nic.in/ ತಂತ್ರಾಂಶದ ಮೂಲಕ ಮೇ 25 ರಿಂದ ಜೂನ್ 30 ರೊಳಗೆ ಅರ್ಜಿ ಸಲ್ಲಿಸಿ ಸಂಬಂಧಿಸಿದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿಯ ಪ್ರತಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಹಾಗೂ ತಾಲ್ಲೂಕುಗಳ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದೆಂದು ಮಂಡ್ಯ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!