Thursday, September 19, 2024

ಪ್ರಾಯೋಗಿಕ ಆವೃತ್ತಿ

ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಂಡ್ಯ ಜಿಲ್ಲೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ವಿವಿಧ ವಸತಿ ಶಾಲೆಗಳ 2023-24 ನೇ ಸಾಲಿನ 6ನೇ ತರಗತಿ ಪ್ರವೇಶ ಪರೀಕ್ಷೆಗೆ 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಮತ್ತು ಮಂಡ್ಯ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್. ಅಂಬೇಡ್ಕರ್, ಇಂದಿರಾಗಾಂಧಿ ವಸತಿ ಶಾಲೆಗಳಿಗೆ 2023-24 ನೇ ಸಾಲಿಗೆ 6ನೇ ತರಗತಿಯ ಅಂಗ್ಲ ಮಾಧ್ಯಮಕ್ಕೆ ಪ್ರವೇಶ ನೀಡಲಾಗುವುದು.

ಆಯ್ಕೆಯಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ವಸತಿ ಸಹಿತ ಉಚಿತ ವ್ಯಾಸಂಗ ಮಾಡಲು, ಶುಲ್ಕವಿಲ್ಲದೇ ಊಟ, ಸಮವಸ್ತ್ರ, ಪಠ್ಯಪುಸ್ತಕ, ಹಾಗೂ ಇನ್ನಿತರ ಶೈಕ್ಷಣಿಕ ಸಾಮಾಗ್ರಿಗಳನ್ನು ನೀಡಲಾಗುವುದು.

ಮಂಡ್ಯ ಜಿಲ್ಲೆಯಲ್ಲಿ ಪ್ರಸ್ತುತ 2022-23 ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ವಿದ್ಯಾರ್ಥಿಯ ಎಸ್‌ಎಟಿಎಸ್ ಸಂಖ್ಯೆ, ಭಾವಚಿತ್ರ 2 (passport size), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್‌ ಹಾಗೂ ಸಂಬಂಧಿತ ಇತರೆ ದಾಖಲಾತಿಗಳೊಂದಿಗೆ ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಿ ಅರ್ಜಿಗಳನ್ನು ಪಡೆದು ಸಂಬಂಧಿಸಿದ ಮುಖ್ಯೋಪಾಧ್ಯಾಯರಿಂದ ಭರ್ತಿ ಮಾಡಿಸಿ, ಹತ್ತಿರದ ವಸತಿ ಶಾಲೆಗಳಲ್ಲೇ ಸಲ್ಲಿಸಬೇಕು.

ಜ.5ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಕೆಗೆ ಜ.22 ಕೊನೆ ದಿನ ಎಂದು ಜಿಲ್ಲಾ ಸಮನ್ವಯಾಧಿಕಾರಿ ಸುರೇಶ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!