ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2021-22 (ಕಳೆದ) ನೇ ಸಾಲಿನಲ್ಲಿ ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿ.ಯು.ಸಿ ಪೂರ್ಣಗೊಳಿಸಿ JEE & NEET ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ 300 ಕ್ಕಿಂತ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮಂಗಳೂರು ಮತ್ತು ಬೆಂಗಳೂರು ನಗರದಲ್ಲಿ ವಸತಿಯುತ JEE & NEET ಸ್ಪರ್ಧಾತ್ಮಕ ಪರೀಕ್ಷೇಗಳಿಗೆ ತರಬೇತಿ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಕಛೇರಿಯ ವೆಬ್‍ಸೈಟ್ www.sw.kar.nic.in ನ ಮೂಲಕ ಜನವರಿ 31 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂ.ಸಂ.08232-220772 ಅನ್ನು ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




