ಮಂಡ್ಯ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯ ನಿರ್ವಹಿಸುತ್ತಿರುವ ಮೌಲಾನ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ, ಮಂಡ್ಯ ಟೌನ್ ಹಾಗೂ ಮೌಲಾನ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ಕಲ್ಕುಣಿ, ಮಳವಳ್ಳಿ ತಾಲ್ಲೂಕು ಸರ್ಕಾರಿ ಮುಸ್ಲಿಂ ವಸತಿ ಶಾಲೆ, ಶ್ರೀರಂಗಪಟ್ಟಣ ಟೌನ್ ಅಲ್ಪಸಂಖ್ಯಾತರ ನವೋದಯ ಮಾದರಿ ವಸತಿ ಶಾಲೆ, ಕೆ.ಆರ್.ಪೇಟೆ ಟೌನ್ಗೆ ಅವಶ್ಯವಿರುವ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಆರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ 26 ಕೊನೆದಿನವಾಗಿದ್ದು, ಅರ್ಹ ಅಭ್ಯರ್ಥಿಗಳು ಬಿ.ಎ., ಬಿ.ಕಾಂ., ಬಿ.ಬಿ.ಎಂ., ಬಿಎಸ್ಸಿ ಪದವಿ ವಿದ್ಯಾರ್ಹತೆ ಜೊತೆಗೆ ಬಿ.ಎಡ್ ಪದವಿ ಹೊಂದಿರುವ ಕನ್ನಡ, ಇಂಗ್ಲೀಷ್, ಉರ್ದು,ಹಿಂದಿ, ವಿಜ್ಞಾನ, ಸಮಾಜ ವಿಜ್ಞಾನ, ಗಣಿತ, ದೈಹಿಕ ಶಿಕ್ಷಕರ ಹುದ್ದೆಗಳಿಗೆ ಅನುಭವವಿರಬೇಕು. (ಗೌರವ ಸಂಭಾವನೆ ನೀಡಲಾಗುವುದು)
ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಅಥವಾ ನಿವೃತ್ತ ಶಿಕ್ಷಕರಿಗೆ ಆಧ್ಯತೆ ನೀಡಲಾಗುವುದು. ಆಸಕ್ತರು ತಮ್ಮ ಸ್ವ-ವಿವರವುಳ್ಳ ಮಾಹಿತಿಯನ್ನು ಅಗತ್ಯ ದೃಢೀಕೃತ ದಾಖಲಾತಿಗಳೊಂದಿಗೆ ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿಗಳ ಕಚೇರಿ, ಮೌಲಾನಾ ಆಜಾದ್ ಭವನ, ಬೀಡಿ ಕಾಲೋನಿ, ಆಟೋ ನಿಲ್ದಾಣದ ಹತ್ತಿರ, ಕೆರೆ ಅಂಗಳ, ಮಂಡ್ಯ ಇಲ್ಲಿಗೆ ಸಲ್ಲಿಸಬಹುದು.
ಮಾಹಿತಿಗಳಿಗಾಗಿ ದೂರವಾಣಿ ಸಂಖ್ಯೆ 08232-297240, ಮೊ.9844340821,8722364009, 7975530110, 9902844846 ನ್ನು ಸಂಪರ್ಕಿಸಬಹುದು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




