Sunday, May 19, 2024

ಪ್ರಾಯೋಗಿಕ ಆವೃತ್ತಿ

ತಮಿಳುನಾಡಿಗೆ ನೀರು ಬಿಡಲ್ಲ ಎಂದ ಸರ್ಕಾರ: ಸುಪ್ರೀಂ ಕೋರ್ಟ್‌ ಮೊರೆ ಹೋಗಲು ಚಿಂತನೆ

ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಸರ್ವಪಕ್ಷಗಳ ಮುಖಂಡರು ಹಾಗೂ ಸಂಸತ್ ಸದಸ್ಯರ ವಿಶೇಷ ತುರ್ತು ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.

ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು 15 ದಿನ ಬಿಡುವಂತೆ ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ ಸೂಚಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ತುರ್ತು ಸಭೆ ಕರೆದಿದ್ದರು.

ತಮಿಳುನಾಡಿಗೆ ನೀರು ಬಿಡದಿರಲು ನಿರ್ಧರಿಸಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮತ್ತೆ ಅರ್ಜಿ ಸಲ್ಲಿಸುವುದು ಅಥವಾ ನಮ್ಮ ಬಳಿ ನೀರು ಇಲ್ಲ ಎಂದು ಸುಪ್ರೀಂ ಕೋರ್ಟ್‌ ಮೊರೆ ಹೋಗುವುದಾಗಿ ಸಭೆಯಲ್ಲಿ ನಿರ್ಧರಿಸಲಾಯಿತು.

ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, “ಸಾಮಾನ್ಯ ಸಂದರ್ಭಗಳಲ್ಲಿ ನೀರು ಬಿಡಲು ನಮ್ಮ ಅಭ್ಯಂತರ ಇಲ್ಲ. ಸಂಕಷ್ಟ ಸಂದರ್ಭಗಳಲ್ಲಿ, ಸಂಕಷ್ಟ ಸೂತ್ರ ಇಲ್ಲದಿರುವುದರಿಂದ ನಾವು ಹೆಚ್ಚು ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತೇವೆ. ನಾವು 99 ಟಿಎಂಸಿ ನೀರು ಬಿಡಬೇಕಿತ್ತು. ಆದರೆ ಇದುವರೆಗೂ 37 ಟಿಎಂಸಿ ಮಾತ್ರ ಹೋಗಿದೆ. ನಮಗೆ 70 ಟಿಎಂಸಿ ನೀರು ಬೆಳೆ ರಕ್ಷಣೆಗೆ ಬೇಕು. ಕುಡಿಯುವ ನೀರಿಗೆ 33 ಟಿಎಂಸಿ ನೀರು ಬೇಕು. ಆದರೆ ನಮ್ಮಲ್ಲಿ ಸಂಗ್ರಹ ಇರುವುದೇ ಕೇವಲ 53 ಟಿಎಂಸಿ ಮಾತ್ರ. ಹೀಗಾಗಿ ನಮ್ಮಲ್ಲಿ ನೀರೇ ಇಲ್ಲ. ನಮ್ಮ ಅಧಿಕಾರಿಗಳು ರಾಜ್ಯದ ವಾಸ್ತವಾಂಶವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ. ಆದರೂ ನಿತ್ಯ 5 ಟಿಎಂಸಿ ನೀರು ಬಿಡಲು ಸೂಚಿಸಲಾಗಿದೆ” ಎಂದು ವಿವರಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!