Friday, September 20, 2024

ಪ್ರಾಯೋಗಿಕ ಆವೃತ್ತಿ

ನಿಗಮ ಮಂಡಳಿಗೆ ನೇಮಕ| ಶ್ರೀರಂಗಪಟ್ಟಣ ಶಾಸಕ ರಮೇಶ್ ಬಾಬು ಸೇರಿದಂತೆ 34 ಜನರಿಗೆ ಅವಕಾಶ

ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಪಡೆಯುವ ನಿಟ್ಟಿನಲ್ಲಿ ಕರ್ನಾಟಕ ಕಾಂಗ್ರೆಸ್‌ ಭರ್ಜರಿ ತಯಾರಿ ನಡೆಸಿದೆ. ಸರ್ಕಾರ ಬಂದು ಎಂಟು ತಿಂಗಳು ಕಳೆದರೂ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಕಾರ್ಯಕರ್ತರಿಗೆ ಹುದ್ದೆಗಳನ್ನು ಕೊಟ್ಟಿಲ್ಲ ಎಂಬ ಅಸಮಾಧಾನ ಕಾಂಗ್ರೆಸ್‌ ಪಾಳಯದಲ್ಲಿ ಭುಗಿಲೆದ್ದ ಮಧ್ಯೆಯೇ ಕೊನೆಗೂ ನಿಗಮ, ಮಂಡಳಿ ಪಟ್ಟಿಯು ಬಿಡುಗಡೆಗೊಂಡಿದೆ. ಈ ಪಟ್ಟಿಯಲ್ಲಿ ಒಟ್ಟು 34 ಶಾಸಕರಿಗೆ ಮಣೆ ಹಾಕಲಾಗಿದೆ. 36 ಶಾಸಕರನ್ನು ವಿವಿಧ ಮಂಡಳಿಗಳ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಅಧಿಕೃತ ಸುತ್ತೋಲೆಯನ್ನು ಸಿಎಂ ಕಚೇರಿ ಜ.26ರ ಸಂಜೆ ಹೊರಡಿಸಿದೆ.

ಶ್ರೀರಂಗಪಟ್ಟಣ ಶಾಸಕ ಎಂ.ಬಿ.ರಮೇಶ್ ಬಾಬು ಬಂಡೀಸಿದ್ಧೇಗೌಡ ಅವರಿಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಚೆಸ್ಕಾಂ) ಅಧ್ಯಕ್ಷ ಸ್ಥಾನ ನೀಡಲಾಗಿದೆ.  ಕರ್ನಾಟಕ ಕರ ಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಕೆ.ಜಿ.ಎಫ್ ಶಾಸಕ ರೂಪಕಲಾ ಅವರು ನೇಮಿಸಲಾಗಿದೆ.

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ಗೆ ಸೇರಿದ ಬಳಿಕ ವಿಧಾನ ಪರಿಷತ್ ಸ್ಥಾನ ಪಡೆದುಕೊಂಡಿದ್ದ ಜಗದೀಶ್ ಶೆಟ್ಟರ್ ಅವರು, ನಿನ್ನೆ(ಜ.25) ಮತ್ತೆ ಬಿಜೆಪಿ ಸೇರಿದ ನಡುವೆಯೇ ಇಂದು ನಿಗಮ, ಮಂಡಳಿ ಪಟ್ಟಿಯಾಗಿದೆ.

ಯಾವ ನಿಗಮ ಮಂಡಳಿಗಳಿಗೆ ಯಾರು ಎಂಬ ಮಾಹಿತಿ ಕೆಳಕಂಡಂತಿದೆ


Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!