Friday, November 20, 2026

ಪ್ರಾಯೋಗಿಕ ಆವೃತ್ತಿ

ಅರಸು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

2022 ರ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿಯ ವಾರ್ಷಿಕ ಪರೀಕ್ಷೆಗಳಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳು  ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 21 ರೊಳಗಾಗಿ ಆನ್‍ಲೈನ್ ವೆಬ್‍ಸೈಟ್ https://bcwd.karnataka.gov.in  ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೊ.8050770004 ಸಂಪರ್ಕಿಸಬಹುದೆಂದು ಮಂಡ್ಯ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ