Tuesday, September 17, 2024

ಪ್ರಾಯೋಗಿಕ ಆವೃತ್ತಿ

ಸಂತ್ರಸ್ತೆ ಅಪಹರಣ ಪ್ರಕರಣ| ಶೀಘ್ರದಲ್ಲೇ ಭವಾನಿ ರೇವಣ್ಣ ಬಂಧನ: ಡಾ.ಜಿ.ಪರಮೇಶ್ವರ್

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಭವಾನಿ ರೇವಣ್ಣ ಅವರನ್ನು ಪೊಲೀಸರು ಹುಡುಕುತ್ತಿದ್ದು, ಶೀಘ್ರವೇ ಅವರ ಬಂಧನವಾಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಭವಾನಿ ರೇವಣ್ಣ ಅವರನ್ನು ಬಂಧನ ಮಾಡಲು ಎಸ್‌ಐಟಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ಅವರು ಸಿಕ್ಕಾಗ ಬಂಧಿಸಲಾಗುವುದು. ಕಾನೂನು ಪ್ರಕಾರ ಕ್ರಮ ಆಗಲಿದೆ” ಎಂದು ತಿಳಿಸಿದ್ದಾರೆ.

“ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ವಿಚಾರವಾಗಿ, ಜೂ.3ರಂದು ಪರಿಷತ್ ಚುನಾವಣೆ ನಾಮಿನೇಷನ್‍ಗೆ ಕೊನೆಯ ದಿನವಾಗಿದ್ದು, ಅದಕ್ಕೆ ಸಭೆಯನ್ನು ಕರೆಯಲಾಗಿದೆ. ನಾಮಿನೇಷನ್ ಪೇಪರ್‌ಗೆ 10 ಜನ ಸಹಿ ಮಾಡಬೇಕು. ಇದೇ ಕಾರಣಕ್ಕೆ ಸಭೆ ಕರೆದಿದ್ದಾರೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಅಪಹರಣ ಪ್ರಕರಣದ ವಿಚಾರಣೆಗೆ ಹಾಜರಾಗದೇ ಭವಾನಿ ರೇವಣ್ಣ ಅವರು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಎಸ್​ಐಟಿ ಅಧಿಕಾರಿಗಳು ವಿಚಾರಣೆಗೆಂದು ಹೊಳೆನರಸೀಪುರದಲ್ಲಿರುವ ಅವರ ನಿವಾಸಕ್ಕೆ ತೆರಳಿದ ವೇಳೆ ಭವಾನಿ ರೇವಣ್ಣ ಅವರು ಮನೆಯಲ್ಲಿ ಇರಲಿಲ್ಲ. ಭವಾನಿ ರೇವಣ್ಣ ಅವರಿಗೆ ಬಂಧನ ಭೀತಿ ಎದುರಾಗಿದ್ದು, ಜಾಮೀನಿಗಾಗಿ ನಾಳೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಆ ಬಳಿಕ ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!