Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಪ್ರತಿಭಟನೆಗೆ ಮುಂದಾದ ಬಿಜೆಪಿ ಕಾರ್ಯಕರ್ತರ ಬಂಧನ

ಮುಡಾ ಹಗರಣ ವಿರುದ್ಧ ಹೋರಾಟ ನಡೆಸಲು ಮುಂದಾಗಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂದಿಸಿರುವುದನ್ನು ಖಂಡಿಸಿ ಬಿ ಜೆ ಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಮುಡಾ ಹಗರಣದ ವಿರುದ್ಧ ಹೋರಾಟ ನಡೆಸಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಮಳವಳ್ಳಿ ಪ್ರವಾಸಿ ಮಂದಿರಕ್ಕೆ ಕರೆತಂದರು.

ಮಳವಳ್ಳಿ ತಾಲೂಕು ಅಧ್ಯಕ್ಷ ಕೃಷ್ಣ ಮಾತನಾಡಿ, ಇಂದು ಬಿ ಜೆ ಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ತೆರಳುತ್ತಿದ್ದ ಸಮಯದಲ್ಲಿ ಪೊಲೀಸರು ಬಂಧಿಸಿರುವುದು ಮುಡಾ ಹಗರಣ ಒಪ್ಪಿಕೊಂಡಂತೆ ಆಗಿದೆ ಎಂದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಯೊಬ್ಬ ಪ್ರಜೆಗೂ ಹೋರಾಟ ಮಾಡುವ ಹಕ್ಕು ನೀಡಿದ್ದು ಆದರೆ ಕಾಂಗ್ರೆಸ್ ಸರ್ಕಾರ ಸಂವಿಧಾನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಮುಡಾ ಹಗರಣದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾಲು ಇದ್ದಂತಾಗಿದೆ, ಆದ್ದರಿಂದ ಅವರು ರಾಜೀನಾಮೆ ನೀಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರಾದ ಅಶೋಕ್ ಕುಮಾರ್, ವೇಣು,ಬಸವರಾಜು, ಕೆಸಿ ನಾಗೇಗೌಡ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಮೋಹನ್ ಕುಮಾರ್ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!