Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಒಂಟಿ ಮಹಿಳೆಯರಿಂದ ಸರ ಎಗರಿಸುತ್ತಿದ್ದ ಕಳ್ಳನ ಬಂಧನ

ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರಗಳನ್ನು ಎಗರಿಸುತ್ತಿದ್ದ ಕಳ್ಳನೊಬ್ಬನನ್ನು ಮಂಡ್ಯ ಪಶ್ಚಿಮ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ, ಆತನಿಂದ 111 ಗ್ರಾಂ ತೂಕದ ಚಿನ್ನದ ಸರಗಳನ್ನು ವಶಪಡಿಸಿಕೊಂಡಿ ದ್ದಾರೆ. ಇವುಗಳ ಮೌಲ್ಯ ₹6.21 ಲಕ್ಷ ಎಂದು ಅಂದಾಜಿಸಲಾಗಿದೆ.

ಮಂಡ್ಯ ತಾಲ್ಲೂಕಿನ ತಗ್ಗಹಳ್ಳಿ ಗ್ರಾಮದವನಾದ ದಿಲೀಪ್ ಕುಮಾರ್ (27) ಎಂಬ ಈತ  ಮಂಡ್ಯ ನಗರದ ವಿವಿಧ ಸ್ಥಳಗಳಲ್ಲಿ ಬೈಕ್‌ ನಲ್ಲಿ ಬಂದು ಒಂಟಿ ಮಹಿಳೆಯರ ಚಿನ್ನದ ಸರಗಳನ್ನು ಕಿತ್ತುಕೊಂಡು ಹೋಗುತ್ತಿದ್ದನೆಂದು ತಿಳಿದು ಬಂದಿದೆ.

ಈ ಪ್ರಕರಣದಲ್ಲಿ ತನಿಖೆಗಾಗಿ ಡಿವೈಎಸ್‌ಪಿ ಜೆ.ಆರ್. ಶಿವಮೂರ್ತಿ, ಇನ್ಸ್ ಪೆಕ್ಟರ್ ಬಿ.ದೇವರಾಜು ನೇತೃತ್ವದಲ್ಲಿ  ಸಿಬ್ಬಂದಿಗಳ ತಂಡ ರಚಿಸಲಾಗಿತ್ತು. ಈ ತಂಡವು ಮಂಡ್ಯ ನಗರ ಮರೀಗೌಡ ಬಡಾವಣೆಯ ಕಾಲುವೆ ಬಳಿ ಅನುಮಾಸ್ಪದವಾಗಿ ಸುತ್ತಾಡುತ್ತಿದ್ದ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಲಾಗಿ, ಈತ 5 ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಬಾಯ್ಬಿಟ್ಟಿದ್ದಾನೆ.

ಮಂಡ್ಯ ಪಶ್ಚಿಮ ಪೊಲೀಸ್ ಠಾಣೆ ಪೊಲೀಸರ ಈ ಕಾರ್ಯವನ್ನು ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ